ಬೈಎಲೆಕ್ಷನ್ ಘೋಷಣೆಗೂ ಮುನ್ನ ಶಿರಾ ಕ್ಷೇತ್ರ ಗೆಲ್ಲೋಕೆ BJPಯಿಂದ ಆತುರದ ಸಿದ್ಧತೆ

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಘೋಷಣೆಗೂ ಮುನ್ನವೇ ಬಿಜೆಪಿಯಿಂದ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕಮಲ ಪಕ್ಷ ಮತದಾರರನ್ನು ತನ್ನತ್ತ ಸೆಳೆಯಲು ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ. ದೇಗುಲಗಳ ಜೀರ್ಣೋದ್ಧಾರ ಹೆಸರಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಹೇಳಲಾಗಿದೆ. ಅಂತೆಯೇ, ಶಿರಾ ತಾಲೂಕಿನ ದೇಗುಲಗಳ ಜೀರ್ಣೋದ್ಧಾರಕ್ಕೆ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸಿಎಂ ಯಡಿಯೂರಪ್ಪ ಒಪ್ಪಿಗೆ ಸಹ ನೀಡಿದ್ದಾರಂತೆ. ಈ ಬಗ್ಗೆ ಮಾಜಿ ಶಾಸಕ ಹಾಗೂ ತುಮಕೂರು […]

ಬೈಎಲೆಕ್ಷನ್ ಘೋಷಣೆಗೂ ಮುನ್ನ ಶಿರಾ ಕ್ಷೇತ್ರ ಗೆಲ್ಲೋಕೆ BJPಯಿಂದ ಆತುರದ ಸಿದ್ಧತೆ
Edited By:

Updated on: Sep 08, 2020 | 12:58 PM

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಘೋಷಣೆಗೂ ಮುನ್ನವೇ ಬಿಜೆಪಿಯಿಂದ ಭರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕಮಲ ಪಕ್ಷ ಮತದಾರರನ್ನು ತನ್ನತ್ತ ಸೆಳೆಯಲು ತಯಾರಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ದೇಗುಲಗಳ ಜೀರ್ಣೋದ್ಧಾರ ಹೆಸರಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಹೇಳಲಾಗಿದೆ. ಅಂತೆಯೇ, ಶಿರಾ ತಾಲೂಕಿನ ದೇಗುಲಗಳ ಜೀರ್ಣೋದ್ಧಾರಕ್ಕೆ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸಿಎಂ ಯಡಿಯೂರಪ್ಪ ಒಪ್ಪಿಗೆ ಸಹ ನೀಡಿದ್ದಾರಂತೆ.

ಈ ಬಗ್ಗೆ ಮಾಜಿ ಶಾಸಕ ಹಾಗೂ ತುಮಕೂರು ಕ್ಷೇತ್ರದ ಜಿಲ್ಲಾಧ್ಯಕ್ಷ ಸುರೇಶ್‌ ಗೌಡ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಸುರೇಶ್ ಗೌಡ ಪತ್ರಕ್ಕೆ ಒಂದೇ ದಿನದಲ್ಲಿ ಸ್ಪಂದಿಸಿದ BS ಯಡಿಯೂರಪ್ಪ ಅವರು ಶಿರಾ ತಾಲೂಕಿನ 9 ದೇವಸ್ಥಾನಗಳ ಜೀರ್ಣೋದ್ಧಾರ ಕೆಲಸಕ್ಕಾಗಿ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲು ಸೂಚಿಸಿದ್ದಾರೆ.