AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ […]

ಬಿಎಸ್​ವೈ ಬಣಕ್ಕೆ ನೀರು ಕುಡಿಸಿ ಶಿವಮೊಗ್ಗ ಮೇಯರ್ ಪಟ್ಟ ಅಲಂಕರಿಸಿದ ಈಶ್ವರಪ್ಪ ಬಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 29, 2020 | 12:52 PM

Share

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್​ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ: ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಪರವಾಗಿ 26 ಜನ ಸದಸ್ಯರು ಮತ ಚಲಾವಣೆ ಮಾಡಿದ್ದು, ಕಾಂಗ್ರೆಸ್​ ಅಭ್ಯರ್ಥಿ ಯಮುನಾ ರಂಗೇಗೌಡ ಪರ ಕೇವಲ 12 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯ ಸುರೇಖಾ ಮುರಳಿಧರ್ ಮತ್ತು ಕಾಂಗ್ರೆಸ್​ನಿಂದ ಮೆಹೆಕ್ ಷರೀಫ್ ಸ್ಪರ್ಧಿಸಿದ್ದರು. ಸುರೇಖಾ ಪರ 26 ಮತಗಳ ಚಲಾವಣೆಯಾಗಿದ್ದು, ಷರೀಫ್ ಪರ 12 ಮತಗಳು ಮಾತ್ರ ಚಲಾವಣೆಯಾಗಿವೆ.

ಯಡಿಯೂರಪ್ಪ ಬಣಕ್ಕೆ ಹಿನ್ನಡೆ: ಶಿವಮೊಗ್ಗ ಪಾಲಿಕೆಯಲ್ಲಿ ಸಚಿವ ಈಶ್ವರಪ್ಪ ಬಣದ ಸುವರ್ಣ ಶಂಕರ್ ಮತ್ತು ಸಿಎಂ ಯಡಿಯೂರಪ್ಪ ಬಣದ ಅನಿತಾ ರವಿಶಂಕರ್​ ನಡುವೆ ತೀವ್ರ ಪೈಪೋಟಿ ಇತ್ತು. ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮವಾಗಿ ಸುವರ್ಣ ಶಂಕರ್ ಅವರನ್ನು ಆಯ್ಕೆ ಮಾಡಲಾಯ್ತು. ಕೊನೆಗೂ ಮೇಯರ್ ರೇಸ್​ನಲ್ಲಿ ಈಶ್ವರಪ್ಪ ಬಣದ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಈಶ್ವರಪ್ಪ ನಿರಾಳರಾಗಿದ್ದಾರೆ.

Published On - 12:51 pm, Wed, 29 January 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು