
ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಲಿಕೆಯಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಯಶಸ್ಸುಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಸುವರ್ಣ ಶಂಕರ್ ಆಯ್ಕೆ:
ಯಡಿಯೂರಪ್ಪ ಬಣಕ್ಕೆ ಹಿನ್ನಡೆ:
ಶಿವಮೊಗ್ಗ ಪಾಲಿಕೆಯಲ್ಲಿ ಸಚಿವ ಈಶ್ವರಪ್ಪ ಬಣದ ಸುವರ್ಣ ಶಂಕರ್ ಮತ್ತು ಸಿಎಂ ಯಡಿಯೂರಪ್ಪ ಬಣದ ಅನಿತಾ ರವಿಶಂಕರ್ ನಡುವೆ ತೀವ್ರ ಪೈಪೋಟಿ ಇತ್ತು. ಇಂದು ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಈಶ್ವರಪ್ಪ ನೇತೃತ್ವದಲ್ಲಿ ಸಭೆ ನಡೆಸಿ ಅಂತಿಮವಾಗಿ ಸುವರ್ಣ ಶಂಕರ್ ಅವರನ್ನು ಆಯ್ಕೆ ಮಾಡಲಾಯ್ತು. ಕೊನೆಗೂ ಮೇಯರ್ ರೇಸ್ನಲ್ಲಿ ಈಶ್ವರಪ್ಪ ಬಣದ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಈಶ್ವರಪ್ಪ ನಿರಾಳರಾಗಿದ್ದಾರೆ.
Published On - 12:51 pm, Wed, 29 January 20