AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ. ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ […]

ಮೊದಲ ಸಮೀಕ್ಷೆಯಲ್ಲಿ ಬಿಜೆಪಿ ಸ್ಥಿತಿಯೇನು? ಯಡಿಯೂರಪ್ಪ ನಿರ್ಣಯವೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 28, 2019 | 3:59 PM

Share

ಬೆಂಗಳೂರು: ಡಿಸೆಂಬರ್ 5ರಂದು ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ವಾರದ ಹಿಂದೆ ವರದಿಯೊಂದು ಬಿಜೆಪಿ ವರಿಷ್ಠರ ಕೈಸೇರಿದೆ. ಆಯಾ ಕ್ಷೇತ್ರಗಳ ಬಿಜೆಪಿ ಉಸ್ತುವಾರಿಗಳ ಮಾಹಿತಿಯ ಅನ್ವಯ ಈ ವರದಿ ಸಿದ್ಧವಾಗಿದೆ.

ಶಿವಾಜಿನಗರ, ಕೆ.ಆರ್.ಪೇಟೆ, ಹುಣಸೂರು, ಕಾಗವಾಡ, ರಾಣೆಬೆನ್ನೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಅನುಮಾನ ಎನ್ನುತ್ತಿದೆ ಸಮೀಕ್ಷಾ ವರದಿ. ಕಾಗವಾಡ ಕ್ಷೇತ್ರದಲ್ಲಿ BJP ಹೀನಾಯವಾಗಿ ಸೋಲಬಹುದು. ಚಿಕ್ಕಬಳ್ಳಾಪುರ, ಹೊಸಕೋಟೆ, ಯಶವಂತಪುರದಲ್ಲಿ 50:50 ಸ್ಥಿತಿಯಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಅಥವಾ ಸೋಲಬಹುದು.

ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಆರಂಭಿಸುವ ಮುನ್ನ ಈ ವರದಿ ಅವರ ಕೈಸೇರಿತ್ತು. ಅದ್ರೆ ವರದಿ ಕೈಸೇರಿದ ತಕ್ಷಣ ಎಚ್ಚೆತ್ತ ಬಿಎಸ್​ವೈ ಪ್ರತಿ ಕ್ಷೇತ್ರದಲ್ಲಿಯೂ 2 ಹಂತದಲ್ಲಿ ಪ್ರವಾಸಕ್ಕೆ ಅಣಿಯಾಗಿದ್ದಾರೆ. ಪಕ್ಷವೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸ ಸಿದ್ಧಪಡಿಸಿದೆ. ವರದಿಯ ನಂತರ ಕ್ಷೇತ್ರಗಳಿಗೆ ನಿಯೋಜಿಸಿರುವವರ ಮೇಲೆ ನಿಗಾ ಇಡಲಾಗಿದೆ. ಬಿಜೆಪಿ ನಾಯಕರು ಎಷ್ಟು ಗಂಭೀರವಾಗಿ ಕೆಲಸ ಮಾಡ್ತಿದ್ದಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಬಿಜೆಪಿ ಮಾನಿಟರಿಂಗ್​ ಮಾಡುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ