ರಿಯಲ್​ ಎಸ್ಟೇಟ್​ ಉದ್ಯಮಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಬಿಜೆಪಿ ಮುಖಂಡ

ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಉದ್ಯಮಿ ನಾಗನಗೌಡ ನೀರಲಗಿ ಮೇಲೆ, ಬಿಜೆಪಿ ಮುಖಂಡ ಕುಮಾರ್​ ಪಾಟೀಲ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಇದರಲ್ಲಿ ಸಿಎಂ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಕೂಡ ಶಾಮೀಲಾಗಿದ್ದಾರೆ ಎಂದೂ ಹೇಳಲಾಗಿದೆ.

ರಿಯಲ್​ ಎಸ್ಟೇಟ್​ ಉದ್ಯಮಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಬಿಜೆಪಿ ಮುಖಂಡ
ಹಲ್ಲೆಗೊಳಗಾದ ರಿಯಲ್​ ಎಸ್ಟೇಟ್​ ಉದ್ಯಮಿ(ಎಡ), ಹಲ್ಲೆ ಮಾಡಿದ ಕುಮಾರ್​ ಪಾಟೀಲ್​ (ಬಲ)
Edited By:

Updated on: Jan 11, 2021 | 5:45 PM

ಧಾರವಾಡ: ರಿಯಲ್​ ಎಸ್ಟೇಟ್​ ಉದ್ಯಮಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಕೊಡಲಿಯಿಂದ ಹಲ್ಲೆ ನಡೆಸಿದ ಘಟನೆ ಧಾರವಾಡದ ಸಾರಸ್ವತಪುರ ಬಡಾವಣೆಯಲ್ಲಿ ನಡೆದಿದೆ.

ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಉದ್ಯಮಿ ನಾಗನಗೌಡ ನೀರಲಗಿ ಮೇಲೆ, ಬಿಜೆಪಿ ಮುಖಂಡ ಕುಮಾರ್​ ಪಾಟೀಲ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಇದರಲ್ಲಿ ಸಿಎಂ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಕೂಡ ಶಾಮೀಲಾಗಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ನೀರಲಗಿ ಕೂಡ ಬಿಜೆಪಿ ಮುಖಂಡನೇ ಆಗಿದ್ದು, ಸದ್ಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

₹20 ಲಕ್ಷ ಬಹುಮಾನದ ಆಸೆಗೆ ನಕಲಿ ಎನ್​ಕೌಂಟರ್: ಸೇನಾ ಕ್ಯಾಪ್ಟನ್ ವಿರುದ್ಧ ಆರೋಪ ಪಟ್ಟಿ