ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​

BY Vijayendra: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಕೂತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ BJPರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​
ಬಿ.ವೈ.ವಿಜಯೇಂದ್ರ
Follow us
KUSHAL V
|

Updated on:Feb 13, 2021 | 6:24 PM

ಮೈಸೂರು: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಕೂತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ BJP ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಕಾಶಪ್ಪನವರ್ ಅಂದ್ರೆ ಮಾಜಿ ಶಾಸಕನಾ ಅಥವಾ ಬಾರಲ್ಲಿ ಕುಳಿತು ಗಲಾಟೆ ಮಾಡಿಕೊಂಡನಲ್ಲ ಅವನಾ? ಎಂದು ವಿಜಯಾನಂದ ಕಾಶಪ್ಪನವರ್ ಆರೋಪಕ್ಕೆ ತಿರುಗೇಟು ಕೊಟ್ಟರು. 

ಹಾದಿ ಬೀದಿಯಲ್ಲಿ ನಿಂತು ಹೇಳಿಕೆಗಳನ್ನು ನೀಡಬಾರದು. ಯಾರ ಯೋಗ್ಯತೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. BJP ಉಪಾಧ್ಯಕ್ಷನಾಗಿ ಇತಿಮಿತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಯಾವ ಹೋರಾಟವನ್ನೂ ದಿಕ್ಕುತಪ್ಪಿಸುವ ಕೆಲಸ ಮಾಡಿಲ್ಲ. ಅದು ನನಗೆ ಸಂಬಂಧಪಟ್ಟ ವಿಚಾರವೂ ಅಲ್ಲ ಎಂದು ವಿಜಯೇಂದ್ರ ತಿರುಗೇಟು ಕೊಟ್ಟರು.

‘ಮೀಸಲಾತಿ ಹೋರಾಟಗಳು ರಾಜಕೀಯ ಲಾಭಕ್ಕೆ ಬಳಕೆಯಾಗುತ್ತಿದೆ’ ಮೀಸಲಾತಿ ಹೋರಾಟಗಳು ರಾಜಕೀಯ ಲಾಭಕ್ಕೆ ಬಳಕೆಯಾಗುತ್ತಿದೆ ಎಂದು BJP ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಶ್ರೀಗಳಿಂದ ಮೀಸಲಾತಿ ಹೋರಾಟಕ್ಕೆ ನಮ್ಮ ತಕರಾರು ಇಲ್ಲ. ತಮ್ಮ ಸಮುದಾಯದ ಪರವಾಗಿ ಶ್ರೀಗಳು ಹೋರಾಟ ಮಾಡುವುದು ಸರಿ. ಆದ್ರೆ ಕೆಲವರು ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದು ಬೇಸರದ ಸಂಗತಿಯೆಂದು ಬಿ.ವೈ.ವಿಜಯೇಂದ್ರ ಹೇಳಿದರು.

ಈ ಹಿಂದೆ, ಸಿಎಂ ಪುತ್ರ ವಿಜಯೇಂದ್ರ 300 ಕ್ಕೂ ಹೆಚ್ಚು ಪೂಜ್ಯರನ್ನು ಸೇರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ.‌ ಸ್ವಾಮೀಜಿಗಳ‌ ಮೂಲಕ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡಬಾರದೆಂದು ಒತ್ತಡ ಹೇರುವ ಕೆಲಸ‌ ನಡೆಯುತ್ತಿದೆ. ವಿಜಯೇಂದ್ರ ನಡೆಸುತ್ತಿರುವ ಷಡ್ಯಂತ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದರು.

ಪಂಚಮಸಾಲಿ ಪಾದಯಾತ್ರೆ ವೇಳೆಯೇ ಸ್ವಾಮೀಜಿಗಳನ್ನು ಸೇರಿಸಬೇಕಿತ್ತಾ ? ವಿಜಯೇಂದ್ರ ಷಡ್ಯಂತ್ರ ನಡೆಯಲ್ಲ.‌ ವಿಧಾನಸೌಧಕ್ಕೆ ಮುತ್ತಿಗೆ ಹಾಕಲ್ಲ, ಧರಣಿ ಮಾಡುತ್ತೇವೆ ಎಂದು ಹೇಳಿದ್ದೇವೆ.‌ ಒಂದು ವೇಳೆ, ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡಿದ್ರೆ ಉಗ್ರ ಹೋರಾಟ ನಡೆಯಲಿದೆ ಎಂದು ಕಾಶಪ್ಪನವರ್ ಹೇಳಿದ್ದರು.

ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟ: ಫೆ. 21ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಸಮಾವೇಶ

Published On - 5:27 pm, Sat, 13 February 21

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ