ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಅನರ್ಹ ಶಾಸಕರಿಗೆ ಬಿಜೆಪಿಯವರು ಕೋಟ್ಯಂತರ ರೂಪಾಯಿ ಕೊಟ್ಟಿದ್ದಾರೆ. ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಂದ ಹಣ ಪಡೆದು ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕ್ರಮ ಕೈಗೊಂಡಿದ್ದೆ. ಆದ್ರೆ, ಅದನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ನೀಡಿದ್ದಾರೆ. ಈ ಮೂಲಕ ದಂಧೆಕೋರರಿಂದ ಹಣ ವಸೂಲಿ ಮಾಡಿ ಅನರ್ಹ ಶಾಸಕರಿಗೆ ನೀಡಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
Published On - 6:01 pm, Sun, 24 November 19