AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ..ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಇಲ್ಲ: ಜೆ.ಪಿ.ನಡ್ಡಾ

CM B.S.Yediyurappa: ಬಿಎಸ್​ವೈ ಎಲ್ಲವನ್ನೂ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. 2 ವರ್ಷ ಪೂರೈಸಿದ  ಅವರನ್ನು ಶ್ಲಾಘಿಸಬೇಕು. ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಇಲ್ಲ ಎಂದೂ ಜೆ.ಪಿ.ನಡ್ಡಾ ಹೇಳಿದ್ದು ಈಗ ಅಚ್ಚರಿಗೆ ಕಾರಣವಾಗಿದೆ.

ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ..ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಇಲ್ಲ: ಜೆ.ಪಿ.ನಡ್ಡಾ
ಜೆಪಿ ನಡ್ಡಾ
TV9 Web
| Updated By: Lakshmi Hegde|

Updated on:Jul 25, 2021 | 5:04 PM

Share

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ (CM B.S.Yediyurappa) ನವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುತ್ತಾರೆ. ಇಂದು ಸಂಜೆ ಹೊತ್ತಿಗೆ ಅದರ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬರಲಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(J.P.Nadda) ಗೋವಾದಲ್ಲಿ ನೀಡಿದ ಹೇಳಿಕೆ ತುಂಬ ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಕರ್ನಾಟಕದಲ್ಲಿ ಯಾವುದೇ ರಾಜಕೀಯ ಅಸ್ಥಿರತೆ ಇಲ್ಲ ಎಂದಿದ್ದಾರೆ.

ಅಷ್ಟೇ ಅಲ್ಲ, ಸಿಎಂ ಯಡಿಯೂರಪ್ಪನವರಿಗೆ ಜೆ.ಪಿ.ನಡ್ಡಾ ಶಹಬಾಸ್​ಗಿರಿಯನ್ನೂ ಕೊಟ್ಟಿದ್ದಾರೆ. ಬಿಎಸ್​ವೈ ಎಲ್ಲವನ್ನೂ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. 2 ವರ್ಷ ಪೂರೈಸಿದ  ಅವರನ್ನು ಶ್ಲಾಘಿಸಬೇಕು. ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಇಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಹಾಗೇ, ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ದೆಹಲಿಯೇ ಬೇರೆ..ಕರ್ನಾಟಕ ರಾಜಕಾರಣವೇ ಬೇರೆ. ಅದನ್ನು ಆಯಾ ರಾಜ್ಯಗಳ ರಾಜಕೀಯ ಸ್ಥಿತಿಗೆ ಅನುಗುಣವಾಗಿ, ಚುನಾವಣೆಯ ವೇಳೆ, ಚುನಾವಣಾ ಸಮಿತಿ ನಿರ್ಧಾರ ಮಾಡುತ್ತದೆ ಎಂದಿದ್ದಾರೆ.

ಕರ್ನಾಟಕ ರಾಜಕಾರಣದಲ್ಲಿ ಕಳೆದ ಒಂದು ವಾರದಿಂದಲೂ  ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುತ್ತಾರೋ ಅಥವಾ ರಾಜೀನಾಮೆ ನೀಡುತ್ತಾರೋ ಎಂಬುದು ಇಂದು ಸಂಜೆ ಹೊತ್ತಿಗೆ ನಿರ್ಣಯವಾಗುತ್ತದೆ. ಹೈಕಮಾಂಡ್​ನಿಂದ ಅಧಿಕೃತ ಸಂದೇಶ ಬರುತ್ತದೆ ಎಂದೇ ಹೇಳಲಾಗಿತ್ತು. ಆದರೆ ಇಂದು ಗೋವಾಕ್ಕೆ ಹೋಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಮಾತುಗಳನ್ನು ಆಡಿದ್ದು ಸಹಜವಾಗಿಯೇ ಅಚ್ಚರಿಗೆ ಕಾರಣವಾಗಿದೆ. ಅಂದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಅಥವಾ ಕೊನೇ ಕ್ಷಣದವೆರೆಗೂ ಗುಟ್ಟು ಬಿಟ್ಟುಕೊಡಬಾರದು ಎಂಬ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್​ ಬಂದಿದೆಯಾ ಎಂಬ ಅನುಮಾನ ಕಾಡುತ್ತಿದೆ.

ಇದನ್ನೂ ಓದಿ: ಕುಸ್ತಿಪಟು ಪ್ರಿಯಾ ಮಲಿಕ್​ ಅವರಿಗೆ ಅಭಿನಂದಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಇಶಾಂತ್ ಶರ್ಮಾ- ಹನುಮಾ ವಿಹಾರಿ

CM BS Yediyurappa: ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ದೊರೆತಿದೆ: ಸಿಎಂ ಯಡಿಯೂರಪ್ಪ

Published On - 4:27 pm, Sun, 25 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ