AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್​ ವ್ಯಂಗ್ಯ

ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್​, ಜಯಲಲಿತಾರಂಥ ಘಟಾನುಘಟಿ ನಾಯಕರ ಮನೆ […]

ಕಾನೂನಿಗೆ ಹೆದರೋದು ಯಾಕೆ?.. ನೀವು ಧೈರ್ಯವಂತ ಬಂಡೆ -ಡಿಕೆಶಿಗೆ ಕಟೀಲ್​ ವ್ಯಂಗ್ಯ
Follow us
KUSHAL V
|

Updated on: Oct 10, 2020 | 6:45 PM

ಬೆಳಗಾವಿ: ನೀವು ಧೈರ್ಯವಂತ ಬಂಡೆ. ಎಲ್ಲವನ್ನೂ ಎದುರಿಸೋರು CBIನ ಎದುರಿಸೋಕೆ ಆಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವೆಂಬ ಆರೋಪದ ವಿಚಾರವಾಗಿ ಸಿಬಿಐ ಸ್ವತಂತ್ರ ಸಂಸ್ಥೆ, ಕಾಂಗ್ರೆಸ್ ಕಾಲಘಟ್ಟದಲ್ಲಿ ಸ್ಥಾಪಿತವಾದ ಸಂಸ್ಥೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನರ ಮೇಲೆ ಸಿಬಿಐ ರೇಡ್ ಆಗಿದೆ. ಲಾಲೂ ಪ್ರಸಾದ್ ಯಾದವ್​, ಜಯಲಲಿತಾರಂಥ ಘಟಾನುಘಟಿ ನಾಯಕರ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಕಾಂಗ್ರೆಸ್ ಅದನ್ನೆಲ್ಲಾ ರಾಜಕೀಯ ದ್ವೇಷಕ್ಕಾಗಿಯೇ ಮಾಡಿಸಿತ್ತಾ? ಕಾಂಗ್ರೆಸ್ ಸಿಬಿಐನ ದಾಳವಾಗಿ ಮಾಡಿಕೊಂಡು ಆಟವಾಡಿಸಿತ್ತಾ? ಎಂದು ಕಟೀಲ್​ ಪ್ರಶ್ನಿಸಿದ್ದಾರೆ.

‘ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ’ ಡಿ.ಕೆ ಶಿವಕುಮಾರ್​ ಮನೆ ಮೇಲೆ ಸಿಬಿಐ ದಾಳಿಯಾಗಿದೆ. ಐಟಿ ತನಿಖೆಯಾಗಿದೆ. ನಿಮಗೇಕೆ ಭಯ ಇರಬೇಕು? ಯಾಕೆ ಜನರನ್ನು ಸೇರಿಸಬೇಕು. ಜೈಲಿಂದ ಬರುವಾಗ ಮೆರವಣಿಗೆ, ಜೈಲಿಗೆ ಹೋಗುವಾಗ ಮೆರವಣಿಗೆ. ನೀವು ಸರಿ ಇದ್ರೆ ಕಾನೂನಾತ್ಮಕ ಹೋರಾಟ ಮಾಡಿ ಪರಿಶುದ್ಧರಾಗಿ ಹೊರ ಬನ್ನಿ ಎಂದು ಹೇಳಿದರು.

ಕಾನೂನಿಗೆ ಹೆದರೋದು ಏಕೆ? ನೀವು ಧೈರ್ಯವಂತ ಬಂಡೆ. ಎಲ್ಲರನ್ನೂ ಎದುರಿಸೋರು ಸಿಬಿಐ ಸಂಸ್ಥೆಯನ್ನು ಎದುರಿಸೋಕೆ ಆಗಲ್ವಾ? ಎಂದು ಡಿಕೆಶಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಪ್ರಶ್ನೆಮಾಡಿದ್ದಾರೆ.

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ