AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ.

ಸಿಡಿ ಷಡ್ಯಂತ್ರದ ‘ಮಹಾನಾಯಕ’ ಡಿ.ಕೆ.ಶಿವಕುಮಾರ್​ ಎಂಬ ಅನುಮಾನದಲ್ಲಿ ಬಿಜೆಪಿ
ಸಿಡಿ ಮಾಸ್ಟರ್​ಮೈಂಡ್​ ನರೇಶ್​ ಜೊತೆ ಡಿ.ಕೆ.ಶಿವಕುಮಾರ್​
Skanda
|

Updated on:Mar 17, 2021 | 12:06 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯ ಹಿಂದಿರುವ ‘ಮಹಾನಾಯಕ’ ಯಾರು ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದೇ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಟ್ವಿಟರ್​ ಸಮರ ಕೂಡ ಶುರುವಾಗಿದ್ದು, ಆರೋಪ ಪ್ರತ್ಯರೋಪಗಳ ಸುರಿಮಳೆ ಆಗುತ್ತಿದೆ. ಈ ನಡುವೆ ಇಂದು (ಮಾರ್ಚ್​ 17) ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಫೋಟೋವೊಂದನ್ನು ಪ್ರಕಟಿಸಿದ್ದು ಸಂಚಲನಕ್ಕೆ ಕಾರಣವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಗೂ ಸಿಡಿ ಪ್ರಕರಣದ ಮಾಸ್ಟರ್​ ಮೈಂಡ್​ ಎನ್ನಲಾದ ನರೇಶ್​ ಇಬ್ಬರೂ ಜೊತೆಗೆ ನಿಂತಿರುವ ಫೋಟೋವನ್ನು ಬಿಜೆಪಿ ಟ್ವೀಟ್​ ಮಾಡಿದೆ.

ಈ ಫೋಟೋ ಸತ್ಯಾಸತ್ಯತೆಯ ಬಗ್ಗೆ ಟಿವಿ9 ಕನ್ನಡ ಡಿಜಿಟಲ್​ಗೆ ಯಾವುದೇ ಮಾಹಿತಿ ಲಭಿಸಿಲ್ಲವಾದರೂ, ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಕಾರಣ ತನಿಖೆ ಹೊಸ ಆಯಾಮ ಪಡೆಯುವ ಸಾಧ್ಯತೆ ಇದೆ. ‘ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ಮಾಸ್ಟರ್‌ ಮೈಂಡ್ ಮತ್ತು ರಿಂಗ್‌ ಮಾಸ್ಟರ್ ಒಂದೇ ಫ್ರೇಮ್‌ನಲ್ಲಿ ಸಿಲುಕಿಕೊಂಡಿರುವುದಕ್ಕೂ, ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎನ್ನುವ ಬರಹದೊಂದಿಗೆ ಈ ಫೋಟೋವನ್ನು ಹಂಚಿಕೊಂಡಿರುವ ಬಿಜೆಪಿ, ಸಿಡಿ ಸುಳಿಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಸಿಲುಕಿಸಲು ಈ ಮೂಲಕ ಪ್ರಯತ್ನಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 12:01 pm, Wed, 17 March 21

Follow Us
Skanda
Skanda
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್