ಎರಡು ದಶಕಗಳ ಬಳಿಕ.. ಮಂಗಳೂರಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ, ಯಾವಾಗ?
ಮಂಗಳೂರು: ನವೆಂಬರ್ 5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಎರಡು ದಶಕದ ಬಳಿಕ ಮಂಗಳೂರಿನಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಗ್ರಾಮ ಪಂಚಾಯಿತಿ, ಲೋಕಸಭಾ ಉಪಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪ್ರಹ್ಲಾದ್ ಜೋಶಿ, ಸದಾನಂದ ಗೌಡ, ರಾಜ್ಯ ಸಮಿತಿ ಪದಾಧಿಕಾರಿಗಳು […]

ಮಂಗಳೂರು: ನವೆಂಬರ್ 5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಎರಡು ದಶಕದ ಬಳಿಕ ಮಂಗಳೂರಿನಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಗ್ರಾಮ ಪಂಚಾಯಿತಿ, ಲೋಕಸಭಾ ಉಪಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪ್ರಹ್ಲಾದ್ ಜೋಶಿ, ಸದಾನಂದ ಗೌಡ, ರಾಜ್ಯ ಸಮಿತಿ ಪದಾಧಿಕಾರಿಗಳು ಸೇರಿದಂತೆ 150 ಮಂದಿ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.
ಇನ್ನು ಮುಂದೆ ಪ್ರತಿ ತಿಂಗಳು, ಪ್ರತಿ ಜಿಲ್ಲೆಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಮೂಲೆಮೂಲೆಗಳಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.