ಮಂಗಳೂರಿನಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ, CM BSY ಇಂದು ಸಂಜೆ ಪ್ರಯಾಣ
ಮಂಗಳೂರು: ನಗರದಲ್ಲಿ ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ವಿಭಾಗಾವಾರು ವರದಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಚಾರ ಮಂಡನೆ ಸಹ ಆಗಲಿದ್ದು ರಾಜ್ಯದಲ್ಲಿ ಕೊವಿಡ್ ನಿಯಂತ್ರಣ ಹಾಗೂ ಪ್ರವಾಹ ಸ್ಥಿತಿಗತಿ ಕುರಿತು ಚರ್ಚೆ ಸಹ ನಡೆಯಲಿದೆ. ಜೊತೆಗೆ, ಬೆಳಗಾವಿ ಲೋಕಸಭಾ ಉಪಚುನಾವಣೆ, ಮಸ್ಕಿ ಉಪಚುನಾವಣೆ ಹಾಗೂ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಲಿದ್ದು ಇದಲ್ಲದೆ, ಗ್ರಾಮ ಪಂಚಾಯಿತಿ ಹಾಗೂ […]

ಮಂಗಳೂರು: ನಗರದಲ್ಲಿ ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ವಿಭಾಗಾವಾರು ವರದಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಕಾರ್ಯಕಾರಿಣಿ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಚಾರ ಮಂಡನೆ ಸಹ ಆಗಲಿದ್ದು ರಾಜ್ಯದಲ್ಲಿ ಕೊವಿಡ್ ನಿಯಂತ್ರಣ ಹಾಗೂ ಪ್ರವಾಹ ಸ್ಥಿತಿಗತಿ ಕುರಿತು ಚರ್ಚೆ ಸಹ ನಡೆಯಲಿದೆ. ಜೊತೆಗೆ, ಬೆಳಗಾವಿ ಲೋಕಸಭಾ ಉಪಚುನಾವಣೆ, ಮಸ್ಕಿ ಉಪಚುನಾವಣೆ ಹಾಗೂ ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಲಿದ್ದು ಇದಲ್ಲದೆ, ಗ್ರಾಮ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಚರ್ಚೆ ನಡೆಯಲಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ಕಾರ್ಯಕಾರಿಣಿ ಸಭೆಯನ್ನು ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಉದ್ಘಾಟನೆ ಮಾಡಲಾಗುವುದು. ಬಳಿಕ 10.30ಕ್ಕೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ಮುಂದುವರಿಕೆ ಆಗುವುದು.
ಇನ್ನು, ಮಂಗಳೂರಿನಲ್ಲಿ ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯೇ ಸಿಎಂ ಬಿ.ಎಸ್. ಯಡಿಯೂರಪ್ಪ ಮಂಗಳೂರಿಗೆ ತೆರಳಲಿದ್ದಾರೆ. ನಾಳೆ ಇಡೀ ದಿನ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಭಾಗಿಯಾಗಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸದಾನಂದಗೌಡ ಮತ್ತು ರಾಜ್ಯ ಸಮಿತಿ ಪದಾಧಿಕಾರಿಗಳು ಸೇರಿ 120 ಪ್ರಮುಖರು ಭಾಗಿಯಾಗುವವರು ಎಂಬ ಮಾಹಿತಿ ಲಭ್ಯವಾಗಿದೆ.
Published On - 11:20 am, Wed, 4 November 20



