
ಬೆಂಗಳೂರು: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿಜೆಪಿಯಿಂದ ಭರ್ಜರಿ ಸಿದ್ಧತೆ ನಡೆದಿದೆ. ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಕಮಲ ಪಕ್ಷ ಇದೀಗ ಯಾತ್ರೆ ನಡೆಸೋಕೆ ಮುಂದಾಗಿದೆ.
ನಾಳೆಯಿಂದ BJP ಗ್ರಾಮ ಸ್ವರಾಜ್ ಯಾತ್ರೆ ಆರಂಭವಾಗುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ BJP ಸಂಸದರೊಂದಿಗೆ ಅನೌಪಚಾರಿಕ ಸಭೆ ನಡೆಸಲು ಮುಂದಾಗಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಚರ್ಚಿಸಲು ಸಿಎಂ ಸಭೆ ಕರೆದಿದ್ದಾರೆ.
ಪಕ್ಷದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದಿದ್ದು ಅನೌಪಚಾರಿಕ ಸಭೆ ಮೂಲಕ ಮುಖ್ಯಮಂತ್ರಿ ಸಂಸದರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
Published On - 2:33 pm, Thu, 26 November 20