ಬೆಂಗಳೂರು: ನಗರದಲ್ಲಿ BMTC ಬಸ್ಸೊಂದು ಏಕಾಏಕಿ ಧಗಧಗನೆ ಹೊತ್ತಿ ಉರಿದು, ಸಂಪೂರ್ಣವಾಗಿ ಭಸ್ಮವಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ ಬಳಿ ಈ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿವಾಜಿನಗರ-ವಿಪ್ರೋ ಗೇಟ್ ಮಾರ್ಗದ G-6 ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.
Published On - 4:42 pm, Thu, 28 November 19