ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಬಿಎಂಟಿಸಿ ಬಸ್ಗಳು ರಸ್ತೆಗಿಳಿಯಲಿವೆ. ಮೇ 17ರಿಂದ ಬಿಎಂಟಿಸಿ ಬಸ್‌ಗಳ ಸಂಚಾರ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗುವ ಸಾರಿಗೆ ನೌಕರರಿಗೆ ಮೆಡಿಕಲ್ ಸರ್ಟಿಫಿಕೇಟ್ ಕಡ್ಡಾಯ ಎಂದು ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಬಿಎಂಟಿಸಿಯ ಎಲ್ಲಾ ಡಿಪೋಗಳಿಂದ ಮೆಡಿಕಲ್ ಸರ್ಟಿಫಿಕೇಟ್ ಜತೆ ನೌಕರರಿಗೆ ಇಂದಿನಿಂದಲೇ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಿಬ್ಬಂದಿಗೆ ಟೋಕನ್ ನೀಡಲಾಗುತ್ತಿದೆ. ಹೀಗಾಗಿ ಶಾಂತಿನಗರ ಆಸ್ಪತ್ರೆಯ ಮುಂಭಾಗದಲ್ಲಿ ಕಂಡಕ್ಟರ್, ಡ್ರೈವರ್ಗಳು ಸರತಿ ಸಾಲಿನಲ್ಲಿ ನಿಂತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.
ಎಲ್ಲ ನೌಕರರು ಆರೋಗ್ಯ ತಪಾಸಣೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ ಬಿಎಂಟಿಸಿ ಬಸ್ಗಳನ್ನು ರಸ್ತೆಗಿಳಿಸಲು ತಯಾರಿ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
Published On - 8:19 am, Tue, 12 May 20