ಕೊರೊನಾಗೆ BMTC ಕಂಡಕ್ಟರ್ ಬಲಿ, ಬಿಲ್ ಕಟ್ಟಲಾಗದೆ ಪತ್ನಿ-ಮಕ್ಕಳ ಪರದಾಟ
ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಇಂದು ಆಸ್ಪತ್ರೆಯಲ್ಲಿ […]
ಬೆಂಗಳೂರು: ಕೊರೊನಾ ಸೋಂಕಿನಿಂದ ಬಿಎಂಟಿಸಿ ಕಂಡಕ್ಟರ್ ಕಂ ಡ್ರೈವರ್ ಸಾವನ್ನಪ್ಪಿದ್ದು, ಆಸ್ಪತ್ರೆ ಬಿಲ್ ಪಾವತಿಸಲಾಗದೆ ಆತನ ಪತ್ನಿ ಹಾಗೂ ಮಕ್ಕಳು ಆಸ್ಪತ್ರೆ ಎದುರು ಕಣ್ಣೀರಿಡುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಕೆ ಆರ್ ನಗರ ತಾಲೂಕಿನ ನಿವಾಸಿಯಾಗಿರುವ ಮೃತ ವ್ಯಕ್ತಿ, ಸದ್ಯ ಪೀಣ್ಯದ ಡಿಪೋ ನಂಬರ್ 22ರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. 10 ದಿನಗಳ ಹಿಂದೆ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು, ಹೀಗಾಗಿ ಮೃತನನ್ನು ಚಿಕ್ಕಬಾಣವರದ NRR ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.
ಆದರೆ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದು, ಆಸ್ಪತ್ರೆ ಸಿಬ್ಬಂದಿ 1.8 ಲಕ್ಷ ಹಣ ಕಟ್ಟಿ ಮೃತದೇಹ ತೆಗೆದುಕೊಂಡು ಹೋಗಿ ಎನ್ನುತ್ತಿದ್ದಾರೆ. ಹೀಗಾಗಿ ಮೃತನ ಹೆಂಡತಿ ಮತ್ತು ಮಕ್ಕಳು ಆಸ್ಪತ್ರೆಯ ಬಿಲ್ ಕಟ್ಟಲಾಗದೆ ಪರದಾಡುತ್ತಿದ್ದಾರೆ.
Published On - 3:21 pm, Fri, 7 August 20