ಕೊರೊನಾ ಭೀತಿ: BMTC ಬಸ್​ಗಳನ್ನು ಶುಚಿಯಾಗಿಡಲು ಸೂಚನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ವೈರಸ್ ಭೀತಿ ಹೆಚ್ಚಾಗಿದೆ. ಬೆಂಗಳೂರಿಗೆ ಬಂದು ಹೋಗಿದ್ದ ಟೆಕ್ಕಿಗೆ ಕೊರೊನಾ ಸೋಂಕು ಇದ್ದದ್ದು ದೃಢಪಡುತ್ತಿದ್ದಂತೆ ಬೆಂಗಳೂರಿನ ಜನ ಬೆಚ್ಚಿ ಬಿದ್ದಿದ್ದಾರೆ. ನಗರದಲ್ಲೂ ಈ ವೈರಸ್ ಹರಡಿದಿಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಕೂಡ ಹೆಚ್ಚಿನ ಗಮನ ಹರಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಎಂಟಿಸಿಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರತಿ ದಿನ ಅತಿ ಹೆಚ್ಚು ಜನರು ಬಸ್​ಗಳನ್ನು ಅವಲಂಬಿಸಿರುತ್ತಾರೆ. ಒಟ್ಟಿಗೆ ಕೂತು ಪ್ರಯಾಣಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡದಂತೆ […]

ಕೊರೊನಾ ಭೀತಿ: BMTC ಬಸ್​ಗಳನ್ನು ಶುಚಿಯಾಗಿಡಲು ಸೂಚನೆ
Follow us
ಸಾಧು ಶ್ರೀನಾಥ್​
|

Updated on:Mar 04, 2020 | 12:26 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ವೈರಸ್ ಭೀತಿ ಹೆಚ್ಚಾಗಿದೆ. ಬೆಂಗಳೂರಿಗೆ ಬಂದು ಹೋಗಿದ್ದ ಟೆಕ್ಕಿಗೆ ಕೊರೊನಾ ಸೋಂಕು ಇದ್ದದ್ದು ದೃಢಪಡುತ್ತಿದ್ದಂತೆ ಬೆಂಗಳೂರಿನ ಜನ ಬೆಚ್ಚಿ ಬಿದ್ದಿದ್ದಾರೆ. ನಗರದಲ್ಲೂ ಈ ವೈರಸ್ ಹರಡಿದಿಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಕೂಡ ಹೆಚ್ಚಿನ ಗಮನ ಹರಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಎಂಟಿಸಿಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರತಿ ದಿನ ಅತಿ ಹೆಚ್ಚು ಜನರು ಬಸ್​ಗಳನ್ನು ಅವಲಂಬಿಸಿರುತ್ತಾರೆ. ಒಟ್ಟಿಗೆ ಕೂತು ಪ್ರಯಾಣಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡದಂತೆ ಬಸ್​ಗಳಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿಯಂತೆ ಏನು ಮಾಡಬೇಕು, ಏನು ಮಾಡಬಾರದು ಅನ್ನೋ ಬಗ್ಗೆ BMTC ಸಿಬ್ಬಂದಿಗೆ ನಿರ್ದೇಶನ ನೀಡಲಾಗುತ್ತಿದೆ.

ಪ್ರತಿನಿತ್ಯ ಡೆಟಾಲ್ ದ್ರಾವಣ ಬಳಸಿ ಬಿಎಂಟಿಸಿ ಬಸ್​​ಗಳ ಶುದ್ಧೀಕರಣ ಮಾಡಬೇಕು. ಪ್ರತಿ ದಿನ ಬಸ್ ಒಳಾಂಗಣ ಹಾಗೂ ಹೊರಭಾಗ ಶುಚಿಯಾಗಿಡಬೇಕು ಎಂದು ವಾಟ್ಸಾಪ್ ಗ್ರೂಪ್​ಗಳಲ್ಲಿ ನೌಕರರಿಗೆ ಸುತ್ತೋಲೆ ಹೊರಡಿಸಿ ಮಾಹಿತಿ ರವಾನೆ ಮಾಡಲಾಗಿದೆ. ಈ ಮೂಲಕ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಹಿಸಲು ಸಾರಿಗೆ ಇಲಾಖೆ ಮುಂದಾಗಿದೆ.

Published On - 9:38 am, Wed, 4 March 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ