ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಕೊರೊನಾ ವೈರಸ್ ಭೀತಿ ಹೆಚ್ಚಾಗಿದೆ. ಬೆಂಗಳೂರಿಗೆ ಬಂದು ಹೋಗಿದ್ದ ಟೆಕ್ಕಿಗೆ ಕೊರೊನಾ ಸೋಂಕು ಇದ್ದದ್ದು ದೃಢಪಡುತ್ತಿದ್ದಂತೆ ಬೆಂಗಳೂರಿನ ಜನ ಬೆಚ್ಚಿ ಬಿದ್ದಿದ್ದಾರೆ. ನಗರದಲ್ಲೂ ಈ ವೈರಸ್ ಹರಡಿದಿಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಕೂಡ ಹೆಚ್ಚಿನ ಗಮನ ಹರಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಎಂಟಿಸಿಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರತಿ ದಿನ ಅತಿ ಹೆಚ್ಚು ಜನರು ಬಸ್ಗಳನ್ನು ಅವಲಂಬಿಸಿರುತ್ತಾರೆ. ಒಟ್ಟಿಗೆ ಕೂತು ಪ್ರಯಾಣಿಸುತ್ತಾರೆ. ಹೀಗಾಗಿ ಕೊರೊನಾ ವೈರಸ್ ಹರಡದಂತೆ ಬಸ್ಗಳಲ್ಲಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿಯಂತೆ ಏನು ಮಾಡಬೇಕು, ಏನು ಮಾಡಬಾರದು ಅನ್ನೋ ಬಗ್ಗೆ BMTC ಸಿಬ್ಬಂದಿಗೆ ನಿರ್ದೇಶನ ನೀಡಲಾಗುತ್ತಿದೆ.
ಪ್ರತಿನಿತ್ಯ ಡೆಟಾಲ್ ದ್ರಾವಣ ಬಳಸಿ ಬಿಎಂಟಿಸಿ ಬಸ್ಗಳ ಶುದ್ಧೀಕರಣ ಮಾಡಬೇಕು. ಪ್ರತಿ ದಿನ ಬಸ್ ಒಳಾಂಗಣ ಹಾಗೂ ಹೊರಭಾಗ ಶುಚಿಯಾಗಿಡಬೇಕು ಎಂದು ವಾಟ್ಸಾಪ್ ಗ್ರೂಪ್ಗಳಲ್ಲಿ ನೌಕರರಿಗೆ ಸುತ್ತೋಲೆ ಹೊರಡಿಸಿ ಮಾಹಿತಿ ರವಾನೆ ಮಾಡಲಾಗಿದೆ. ಈ ಮೂಲಕ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಹಿಸಲು ಸಾರಿಗೆ ಇಲಾಖೆ ಮುಂದಾಗಿದೆ.
Published On - 9:38 am, Wed, 4 March 20