ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ

BMTC ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ.

ಸಂಪರ್ಕಕ್ಕೆ ಸಿಗುತ್ತಿಲ್ಲ 2 ಸಾವಿರ BMTC ಸಿಬ್ಬಂದಿ.. ಶಿಸ್ತು ಕ್ರಮ ಕೈಗೊಳ್ಳಲು ನಿಗಮಾ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Feb 05, 2021 | 8:09 AM

ಬೆಂಗಳೂರು: ಮಹಾಮಾರಿ ಕೊರೊನಾ ಬಳಿಕ BMTCಯಲ್ಲಿ ಸುಮಾರು 2 ಸಾವಿರ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಲಾಖೆಗೆ ಮಾಹಿತಿ ನೀಡದೆ ರಜೆಗೆ ಸೂಕ್ತ ಕಾರಣವೂ ತಿಳಿಸದೆ ಸಂಪರ್ಕದಿಂದ ದೂರ ಉಳಿದಿದ್ದಾರೆ. ಹಾಗಾಗಿ BMTC ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇಲಾಖೆ ನಿರ್ಧಾರಕ್ಕೆ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. KSRTCಕೊವಿಡ್ ವೇಳೆ ರಜೆ ಕೊಡುವ ಪದ್ಧತಿಯನ್ನ ತಂದಿತ್ತು. ರಜೆ ಬಯಸುವ ಸಿಬ್ಬಂದಿ ವೇತನ ರಹಿತ ರಜೆ ಪಡೆಯಬಹುದು ಎಂದು ಕೊರೊನಾ ಸಮಯದಲ್ಲಿ ನಿಯಮವೊಂದನ್ನು ಜಾರಿಗೆ ತಂದಿತ್ತು. ಆದ್ರೆ ಬಿಎಂಟಿಸಿಯಲ್ಲಿ ಈ ರೀತಿಯ ಯಾವುದೇ ನಿಯಮ ಇಲ್ಲ. ಆದರೂ ಕಾರಣ ನೀಡದೆ 2 ಸಾವಿರ ಸಿಬ್ಬಂದಿ ರಜೆ ಹಾಕಿದ್ದಾರೆ.

ಇಷ್ಟು ದಿನ ರಜೆಯಲ್ಲಿರುವ ಸಿಬ್ಬಂದಿಗೆ BMTC ಕಾದು ನೋಡಿತ್ತು. ಆದ್ರೆ ಅವರ ಸುಳಿವು ಇಲ್ಲದ ಕಾರಣ ಈಗ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಕೊವಿಡ್ ಬಳಿಕ ಬಿಎಂಟಿಸಿಯ 6500 ಬಸ್‌ಗಳ ಪೈಕಿ ಕೇವಲ 4500ಸಾವಿರ ಬಸ್‌ಗಳು ಸಂಚಾರ ಆರಂಭಿಸಿದ್ವು. ಈಗ ಬಸ್‌ಗಳ ಸಂಚಾರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಸಂಪರ್ಕಿಸಲು ಬಿಬಿಎಂಪಿಯಿಂದ ನಿರಂತರ ಪ್ರಯತ್ನ ನಡೆಯುತ್ತಿದೆ.

ಕೆಲವರು ಸಂಪರ್ಕಕ್ಕೆ ಸಿಗುತ್ತಿಲ್ಲ ಇದರಲ್ಲಿ ಕೆಲವು ಸಿಬ್ಬಂದಿ ಇನ್ನೂ ಬಿಎಂಟಿಸಿಯ ಸಂಪರ್ಕಕ್ಕೆ ಸಿಗುತ್ತಿಲ್ಲ. ರಜೆ ಹಾಕುತ್ತಿರುವುದಕ್ಕೆ ಸೂಕ್ತ ಕಾರಣವನ್ನೂ ನೀಡಿಲ್ಲ. ಹೀಗಾಗಿ ನಿಗಮ, ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಆದ್ರೆ ಬಿಎಂಟಿಸಿ ನಿರ್ಧಾರವನ್ನು ಸಿಬ್ಬಂದಿ ತೀವ್ರವಾಗಿ ಖಂಡಿಸಿದ್ದಾರೆ. ಈಗಾಗಲೇ ಕೆಲಸಕ್ಕೆ ಹಾಜರಾಗುತ್ತಿರುವವರಿಗೆ ಡ್ಯೂಟಿ ಸಿಗುತ್ತಿಲ್ಲ. ಸಿಬ್ಬಂದಿ ರಜೆ ಕಟ್ ಮಾಡಿಕೊಂಡು ವೇತನವಿಲ್ಲದೆ ಕಳಿಸ್ತಿದ್ದಾರೆ. ಈಗಾಗಲೇ ಬಿಎಂಟಿಸಿ ನೌಕರರ ಎಲ್ಲ ರಜೆಗಳು ಖಾಲಿಯಾಗಿವೆ. ಇಂದು ಬಿಎಂಟಿಸಿ ಅಧಃಪತನವೆಂದು ಸಾರಿಗೆ ಮುಖಂಡರು ಕಿಡಿ ಕಾರಿದ್ದಾರೆ.

ನೌಕರರ ಸಂಬಳಕ್ಕಾಗಿ ಸಾಲಮಾಡಲು ಹೊರಟಿರುವ BMTC; 643 ಹೊಸ ಬಸ್ ಖರೀದಿಗೆ ಟೆಂಡರ್

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್