
ಮಂಡ್ಯ: ನಿಶ್ಚಿತಾರ್ಥ ಮುಗಿಸಿ ಜುಲೈ 26 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಬೇಕಿದ್ದ ಮಂಚೇಗೌಡ ಎಂಬ ಯುವಕ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೂಲತ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯ ಮುತ್ತಳ್ಳಿ ನಿವಾಸಿ ಮಂಚೇಗೌಡ ಬಣ್ಣಾರಿ ಅಮ್ಮನ್ ಶುಗರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಜುಲೈ 26ರಂದು ಮದುವೆ ನಿಶ್ಚಯವಾಗಿತ್ತು. ಆದರೆ ತೀವ್ರ ಬೆನ್ನು ನೋವಿನಿಂದ ನರಳುತ್ತಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಈ ಮೊದಲೇ ಬೆನ್ನು ನೋವು ಇಷ್ಟೊಂದು ಕಾಡಿದ್ದರೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರಲಿಲ್ಲ, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿರುವ ಮಂಚೇಗೌಡ, ಈ ಹುಡುಗಿಯನ್ನು ನಾನು ಯಾವುದೇ ರೀತಿಯಲ್ಲು ಕೆಟ್ಟದಾಗಿ ಬಳಸಿಕೊಂಡಿಲ್ಲ. ಯಾರೂ ತಪ್ಪು ತಿಳಿಯಬೇಡಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾನೆ. ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನೆಡೆದಿದ್ದು, ಸದ್ಯ ಪೊಲೀಸರಿಂದ ಮೃತ ದೇಹಕ್ಕಾಗಿ ಕೆರೆಯಲ್ಲಿ ಹುಡುಕಾಟ ಪ್ರಾರಂಭವಾಗಿದೆ.
Published On - 4:49 pm, Tue, 21 July 20