ಗದಗ: ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ. 14 ವರ್ಷದ ಚನ್ನವೀರಗೌಡ ಹಳೇಗೌಡರ ನೀರುಪಾಲಾದ ಮೃತ ಬಾಲಕ ಎಂದು ತಿಳಿದುಬಂದಿದೆ.
ಚನ್ನವೀರಗೌಡ ಗೆಳೆಯರೊಂದಿಗೆ ಹಿರೇಹಳ್ಳದಲ್ಲಿ ನಿನ್ನೆ ಈಜಲು ಹೋದಾಗ ಮುಳುಗಿ ಸಾವನ್ನಪ್ಪಿದ್ದಾನೆ. ಈತನ ಜೊತೆ ಈಜಲು ಹೋದ ಗೆಳೆಯರು ಗ್ರಾಮದಲ್ಲಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ಮೃತ ಬಾಲಕನ ಕುಟುಂಬಸ್ಥರು ಹಿರೇಹಳ್ಳದ ಬಳಿ ಜಮಾಯಿಸಿದರು.
ಬುಧವಾರ ಬೆಳಗ್ಗೆ 11 ಗಂಟೆಯಿಂದಲೇ ಬಾಲಕನ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿತ್ತು. ಇಂದು ಅಗ್ನಿಶಾಮಕ ದಳದ ಸಿಬ್ಬಂದಿ ಮೀನುಗಾರರು ಹಾಗೂ ಸ್ಥಳೀಯರ ಸಹಕಾರದಿಂದ ಮೃತದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸ್ ಠಾಣೆಯ CPI ಸುಧೀರ್ ಬೆಂಕಿ ಭೇಟಿ ನೀಡಿದ್ದರು.