
ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ಬಾಲಕನೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿಯಲ್ಲಿ ನಡೆದಿದೆ. 12 ವರ್ಷದ ಬಾಲಕ ಗೋವರ್ಧನ ಕೃಷಿ ಹೊಂಡದಲ್ಲಿ ಸಾವನ್ನಪ್ಪಿದ್ದಾನೆ.
ಗೋರ್ವಧನ ಹೊಂಡದಲ್ಲಿ ಕಡಲೆಕಾಯಿ ತೊಳೆಯಲು ಹೋದ ವೇಳೆ ದುರಂತ ಸಂಭವಿಸಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.