ಮಂಗಳೂರು ಗುಡ್ಡ ಕುಸಿತ: ಮಣ್ಣಿನಲ್ಲಿ ಸಿಲುಕಿದ್ದ ಮಕ್ಕಳ ದುರ್ಮರಣ
ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಬಳಿ ನಡೆದಿದ್ದ ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಇಬ್ಬರೂ ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 30 ಅಡಿಯಷ್ಟು ಮಣ್ಣಿನ ಕೆಳಗೆ ಸಿಲುಕಿದ್ದ 16 ವರ್ಷ ಹಾಗೂ 10 ವರ್ಷದ ಮಕ್ಕಳಿಬ್ಬರೂ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಸತತ ನಾಲ್ಕೂವರೆ ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಬಳಿಕ ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ವೇಳೆ ಮಕ್ಕಳಿಬ್ಬರನ್ನು ಌಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ರಕ್ಷಣಾ ತಂಡದ ಸಿಬ್ಬಂದಿ ಮುಂದಾಗಿದ್ದರು. ಆದರೆ, ಇದೀಗ […]
ದಕ್ಷಿಣ ಕನ್ನಡ: ಜಿಲ್ಲೆಯ ಮಂಗಳೂರಿನ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆ ಬಳಿ ನಡೆದಿದ್ದ ಗುಡ್ಡ ಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಇಬ್ಬರೂ ಮಕ್ಕಳು ಸಾವನ್ನಪ್ಪಿದ್ದಾರೆ. ಸುಮಾರು 30 ಅಡಿಯಷ್ಟು ಮಣ್ಣಿನ ಕೆಳಗೆ ಸಿಲುಕಿದ್ದ 16 ವರ್ಷ ಹಾಗೂ 10 ವರ್ಷದ ಮಕ್ಕಳಿಬ್ಬರೂ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಸತತ ನಾಲ್ಕೂವರೆ ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ಬಳಿಕ ಮಕ್ಕಳಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ವೇಳೆ ಮಕ್ಕಳಿಬ್ಬರನ್ನು ಌಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ರಕ್ಷಣಾ ತಂಡದ ಸಿಬ್ಬಂದಿ ಮುಂದಾಗಿದ್ದರು. ಆದರೆ, ಇದೀಗ ಮಕ್ಕಳಿಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಸಿಎಂ ಸೂಚನೆ ಮಕ್ಕಳಿಬ್ಬರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಪರಿಹಾರ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಜೊತೆಗೆ ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವವರ ಸ್ಥಳಾಂತರಕ್ಕೆ ಆದೇಶ ನೀಡಿದ್ದು ಬೋಂಡಂತಿಲ್ಲ ಗ್ರಾಮದ ಸರ್ವೆ ನಂಬರ್ 102ರಲ್ಲಿ ಜಾಗ ಗುರುತಿಸಿ ಮನೆ ನಿರ್ಮಿಸಿಕೊಡಿ ಅಂತಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
Published On - 5:26 pm, Sun, 5 July 20