ತಗ್ಗುತ್ತಿದೆ ‘ಬ್ರಹ್ಮಾಸ್ತ್ರ’ ಸಿನಿಮಾ ಕಲೆಕ್ಷನ್; ರಣಬೀರ್​-ಆಲಿಯಾ ಚಿತ್ರ ಬಾಚಿದ ಹಣ ಎಷ್ಟು?

ಬಾಲಿವುಡ್​ನಲ್ಲಿ ಇತ್ತೀಚೆಗೆ ಯಾವ ಚಿತ್ರಗಳೂ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಅಲ್ಲೊಂದು, ಇಲ್ಲೊಂದು ಸಿನಿಮಾಗಳು ಮಾತ್ರ ನೂರು ಕೋಟಿ ರೂಪಾಯಿ ಕ್ಲಬ್ ಸೇರುತ್ತಿವೆ.

ತಗ್ಗುತ್ತಿದೆ ‘ಬ್ರಹ್ಮಾಸ್ತ್ರ’ ಸಿನಿಮಾ ಕಲೆಕ್ಷನ್; ರಣಬೀರ್​-ಆಲಿಯಾ ಚಿತ್ರ ಬಾಚಿದ ಹಣ ಎಷ್ಟು?
ರಣಬೀರ್​-ಆಲಿಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 15, 2022 | 3:57 PM

ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ (Brahmastra Movie) ಮಾಡಿದ ಅಬ್ಬರ ತುಂಬಾನೇ ದೊಡ್ಡದು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಮೂರೇ ದಿನಕ್ಕೆ ದೊಡ್ಡ ದಾಖಲೆ ಬರೆಯಿತು. ಹಲವು ದಾಖಲೆಗಳನ್ನು ಈ ಸಿನಿಮಾ ಪುಡಿ ಮಾಡಿದೆ. ಆದರೆ, ದಿನ ಕಳೆದಂತೆ ಸಿನಿಮಾದ ಕಲೆಕ್ಷನ್ ತಗ್ಗುತ್ತಿದೆ. ನೂರಾರು ಕೋಟಿ ಬಾಚಿಕೊಂಡಿದ್ದ ಈ ಚಿತ್ರ ಈಗ ಬೆರಳೆಣಿಕೆ ಕೋಟಿಯಷ್ಟೇ ಗಳಿಕೆ ಮಾಡುತ್ತಿದೆ. ಅದಕ್ಕೂ ಕಾರಣ ಇದೆ.

ಬಾಲಿವುಡ್​ನಲ್ಲಿ ಇತ್ತೀಚೆಗೆ ಯಾವ ಚಿತ್ರಗಳೂ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಅಕ್ಷಯ್ ಕುಮಾರ್, ಆಮಿರ್ ಖಾನ್​ ಅವರಂತಹ ಸಿನಿಮಾಗಳೇ ಬಾಕ್ಸ್ ಆಫೀಸ್​ನಲ್ಲಿ ಸೊರಗುತ್ತಿದೆ. ಅಲ್ಲೊಂದು, ಇಲ್ಲೊಂದು ಸಿನಿಮಾಗಳು ಮಾತ್ರ ನೂರು ಕೋಟಿ ರೂಪಾಯಿ ಕ್ಲಬ್ ಸೇರುತ್ತಿವೆ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡುವ ಮೂಲಕ ಹಿಂದಿ ಚಿತ್ರರಂಗಕ್ಕೆ ಬೂಸ್ಟ್ ಸಿಕ್ಕಿದೆ. ಆರಂಭದಲ್ಲಿ ಅಬ್ಬರಿಸಿದ್ದ ಈ ಸಿನಿಮಾದ ಕಲೆಕ್ಷನ್ ದಿನ ಕಳೆದಂತೆ ತಗ್ಗುತ್ತಿದೆ.

ಶುಕ್ರವಾರ ಅಂದರೆ ಸೆಪ್ಟೆಂಬರ್ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ 37.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಸೆಪ್ಟೆಂಬರ್ 10ರಂದು 42.50 ಕೋಟಿ ರೂ., ಸೆಪ್ಟೆಂಬರ್ 11ರಂದು 45 ಕೋಟಿ ರೂ. ಸೆಪ್ಟೆಂಬರ್ 12ರಂದು 16.40 ಕೋಟಿ ರೂ., ಸೆಪ್ಟೆಂಬರ್ 13ರಂದು 12.50 ಕೋಟಿ ರೂ. ಹಾಗೂ ಸೆಪ್ಟೆಂಬರ್ 14ರಂದು ಈ ಸಿನಿಮಾ 10.50 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ದೇಶದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 164 ಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ
Image
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
Image
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
Image
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
Image
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ವಾರದ ದಿನಗಳಲ್ಲಿ ಸಿನಿಮಾ ವೀಕ್ಷಿಸುವವರ ಸಂಖ್ಯೆ ಕಡಿಮೆ. ಆದಾಗ್ಯೂ ‘ಬ್ರಹ್ಮಾಸ್ತ್ರ’ ಸಿನಿಮಾ ಡಬಲ್ ಡಿಜಿಟ್ ಕಾಪಾಡಿಕೊಂಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ವಾರಾಂತ್ಯದಲ್ಲಿ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡುವ ನಿರೀಕ್ಷೆ ಇದೆ. ಹಾಗಾದಲ್ಲಿ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಅನಾಯಾಸವಾಗಿ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ವಿಶ್ವ ಮಟ್ಟದಲ್ಲಿ ಚಿತ್ರ 300 ಕೋಟಿ ರೂಪಾಯಿ ಕಲೆಕ್ಷನ್​ ಗಳಿಕೆ ಮಾಡಲಿದೆ.

ಇದನ್ನೂ ಓದಿ: ರಣಬೀರ್ ನಟನೆಯ ‘ಬ್ರಹ್ಮಾಸ್ತ್ರ’ ಗೆಲುವಿನಲ್ಲಿ ಆಲಿಯಾ ಭಟ್​ಗಿಲ್ಲ ಪಾಲು; ಯಾಕೀ ತಾರತಮ್ಯ?

ಅಯಾನ್ ಮುಖರ್ಜಿ ಅವರು ‘ಬ್ರಹ್ಮಾಸ್ತ್ರ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಆಲಿಯಾ ಭಟ್​-ರಣಬೀರ್ ಕಪೂರ್ ಜತೆಗೆ ಅಮಿತಾ ಭಚ್ಚನ್, ಶಾರುಖ್ ಖಾನ್, ಮೌನಿ ರಾಯ್ ಹಾಗೂ ನಾಗಾರ್ಜುನ, ದೀಪಿಕಾ ಪಡುಕೋಣೆ ಕೂಡ ಒಂದೊಂದು ಪಾತ್ರ ನಿರ್ವಹಿಸಿದ್ದಾರೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್