ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಕಿಲ್ಲರ್​ BMTC ಬಸ್ ಡಿಕ್ಕಿ: ಇಬ್ಬರ ಸಾವು

|

Updated on: Jan 06, 2020 | 11:33 AM

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಟ್ಟಿಗೆ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬಿಎಂಟಿಸಿ ಬಸ್ ಆಟೋ, ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭೈರಪ್ಪ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ರೇಕ್ ಫೇಲ್, ರಸ್ತೆ ದುರಸ್ತಿ ಕಾರ್ಯ: ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಾಗರಾಜು, ಅಭಿಷೇಕ್ ಸೇರಿದಂತೆ ಮುಂತಾದವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬಸ್​ನ ಬ್ರೇಕ್ ಫೇಲ್ ಆಗಿದ್ದರಿಂದ […]

ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಕಿಲ್ಲರ್​ BMTC ಬಸ್ ಡಿಕ್ಕಿ: ಇಬ್ಬರ ಸಾವು
Follow us on

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಟ್ಟಿಗೆ ಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬಿಎಂಟಿಸಿ ಬಸ್ ಆಟೋ, ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಭೈರಪ್ಪ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬ್ರೇಕ್ ಫೇಲ್, ರಸ್ತೆ ದುರಸ್ತಿ ಕಾರ್ಯ:
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ನಾಗರಾಜು, ಅಭಿಷೇಕ್ ಸೇರಿದಂತೆ ಮುಂತಾದವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬಸ್​ನ ಬ್ರೇಕ್ ಫೇಲ್ ಆಗಿದ್ದರಿಂದ ಘಟನೆ ಸಂಭವಿಸಿದೆ. ಇಳಿಜಾರಿನಲ್ಲಿ ಬಸ್​ನ ಬ್ರೇಕ್ ಫೇಲ್ ಆಗಿದೆ. ರಸ್ತೆಯ ಒಂದು ಭಾಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಹೀಗಾಗಿ ಚಾಲಕ ರಸ್ತೆಯಲ್ಲಿ ಇದ್ದವರನ್ನು ಉಳಿಸಲು ಕಾಮಗಾರಿ ನಡೆಯುತ್ತಿದ್ದ ಕಡೆಗೆ ತಿರುಗಿಸಿದ್ದಾನೆ. ಇದರಿಂದಾಗಿ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






Published On - 10:15 am, Mon, 6 January 20