ಸೆಲ್ಲಾರ್ ನಿರ್ಮಾಣಕ್ಕೆ ಅನುಮತಿ ಪಡೆದಿಲ್ಲವೆಂಬ ನೆಪ; 10 ಲಕ್ಷ ಲಂಚಕ್ಕೆ ಬೇಡಿಕೆ?

ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ಸದಸ್ಯರ ವಿರುದ್ಧ ಲಂಚ ವಸೂಲಿ ಆರೋಪ ಕೇಳಿಬಂದಿದೆ. ಆ​ರ್​ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಮಾಡಿರುವ ಈ ಆರೋಪಕ್ಕೆ ಪುಷ್ಟಿ ನೀಡುವಂತಹ ಆಡಿಯೋವೊಂದು ಬಿಡುಗಡೆಯಾಗಿದೆ. ಏನಿದು ಲಂಚಗುಳಿ ಘಟನೆ? ನಗರದ ರಾಜಕುಮಾರ್​ ರಸ್ತೆಯಲ್ಲಿ ರಮೇಶ್​ ಎಂಬುವರು 4 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದರು. ಆದರೆ ಅವರು ಸೆಲ್ಲಾರ್​ ನಿರ್ಮಿಸಲು ಅನುಮತಿ ಪಡೆದಿಲ್ಲ ಎಂಬ ನೆಪವೊಡ್ಡಿ ಮಹಾನಗರ ಪಾಲಿಕೆ ಸಮಿತಿ ಕಟ್ಟಡ ಧ್ವಂಸಕ್ಕೆ ಮುಂದಾಯಿತು. ಈ ಮಧ್ಯೆ, ಧ್ವಂಸ ಮಾಡಬಾರದು ಎಂದರೆ 10 ಲಕ್ಷ […]

ಸೆಲ್ಲಾರ್ ನಿರ್ಮಾಣಕ್ಕೆ ಅನುಮತಿ ಪಡೆದಿಲ್ಲವೆಂಬ ನೆಪ; 10 ಲಕ್ಷ ಲಂಚಕ್ಕೆ ಬೇಡಿಕೆ?
Follow us
| Edited By: KUSHAL V

Updated on: Nov 20, 2020 | 1:36 PM

ಮೈಸೂರು: ಇಲ್ಲಿನ ಮಹಾನಗರ ಪಾಲಿಕೆ ಸದಸ್ಯರ ವಿರುದ್ಧ ಲಂಚ ವಸೂಲಿ ಆರೋಪ ಕೇಳಿಬಂದಿದೆ. ಆ​ರ್​ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಮಾಡಿರುವ ಈ ಆರೋಪಕ್ಕೆ ಪುಷ್ಟಿ ನೀಡುವಂತಹ ಆಡಿಯೋವೊಂದು ಬಿಡುಗಡೆಯಾಗಿದೆ.

ಏನಿದು ಲಂಚಗುಳಿ ಘಟನೆ? ನಗರದ ರಾಜಕುಮಾರ್​ ರಸ್ತೆಯಲ್ಲಿ ರಮೇಶ್​ ಎಂಬುವರು 4 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದರು. ಆದರೆ ಅವರು ಸೆಲ್ಲಾರ್​ ನಿರ್ಮಿಸಲು ಅನುಮತಿ ಪಡೆದಿಲ್ಲ ಎಂಬ ನೆಪವೊಡ್ಡಿ ಮಹಾನಗರ ಪಾಲಿಕೆ ಸಮಿತಿ ಕಟ್ಟಡ ಧ್ವಂಸಕ್ಕೆ ಮುಂದಾಯಿತು. ಈ ಮಧ್ಯೆ, ಧ್ವಂಸ ಮಾಡಬಾರದು ಎಂದರೆ 10 ಲಕ್ಷ ರೂ. ಹಣ ಕೊಡಬೇಕು ಎಂದು ರಮೇಶ್​ ಬಳಿ ಪಾಲಿಕೆ ಸದಸ್ಯೆ ಲಕ್ಷ್ಮೀ ಶಿವಣ್ಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಲಕ್ಷ್ಮೀ ಶಿವಣ್ಣ ಮಾತನಾಡಿದ್ದಾರೆನ್ನಲಾದ ಆಡಿಯೋ ಕೂಡ ಬಿಡುಗಡೆಯಾಗಿದೆ. ಮಾಜಿ ಮೇಯರ್​ ಸಂದೇಶ್​ ಸ್ವಾಮಿಗೂ ಈ ಹಣದಲ್ಲಿ ಪಾಲಿದೆ ಎಂದು ಸದಸ್ಯೆ ಹೇಳಿದ್ದು, ಆಡಿಯೋದಲ್ಲಿ ಅದು ಕೇಳಿಬಂದಿದೆ.

ಪಾಲಿಕೆ ಸದಸ್ಯರು ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಎಸಿಬಿಗೆ ದೂರು ನೀಡಿದ್ದೆ. ಲಂಚ ಸ್ವೀಕರಿಸುವಾಗಲೇ ದಾಳಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅವರ ವಿರುದ್ಧವೂ ಪ್ರಕರಣ ದಾಖಲು ಮಾಡುತ್ತೇವೆ ಎಂದು ಕಟ್ಟಡ ಮಾಲೀಕ ರಮೇಶ್​ ತಿಳಿಸಿದ್ದಾರೆ.

ನಾವು ಅನುಮತಿ ಪಡೆಯದೆ ಸೆಲ್ಲಾರ್​ ನಿರ್ಮಾಣ ಮಾಡಿದ್ದು ಸತ್ಯ. ಆ ಬಗ್ಗೆ ಅವರು ಕಾನೂನಿನ ಅಡಿ ಕ್ರಮ ಕೈಗೊಳ್ಳಲಿ. ಅದು ಬಿಟ್ಟು ಲಂಚ ಕೇಳುತ್ತಾರೆ. ಈಗಾಗಲೇ ಎರಡು ಪಟ್ಟು ದಂಡದ ಜತೆ, ಕಂದಾಯ ಕಟ್ಟುತ್ತಿದ್ದೇವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಗಂಗರಾಜು ಅವರೂ ಕೂಡ ರಮೇಶ್ ಜತೆ ಇದ್ದು, ಬೆಂಬಲ ಸೂಚಿಸಿದ್ದಾರೆ.

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ