
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಅಂದ ಹಾಗೆ, ಸೇತುವೆಯನ್ನು L&T ಕಂಪನಿ ಕಡೆಯಿಂದ ಬಂದ್ ಮಾಡಲಾಗಿದೆ ಎಂದು ಹೇಳಲಾಗಿದೆ. ಮುಂಜಾಗ್ರತಾ ಕ್ರಮದಿಂದ ವಾಹನ ಸಂಚಾರ ಸ್ಥಗಿತ ಮಾಡಿದ್ದೇವೆ. ಎಂದು ಈ ಕುರಿತು L&Tಯಿಂದ ಮಾಹಿತಿ ಸಿಕ್ಕಿದೆ. ಇದರಿಂದ ವಾಹನ ಸವಾರರು ಎರಡು ದಿನಗಳಿಂದ ಪರದಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇಲ್ಲೇ ಸಿಕ್ಕಿಕೊಂಡಿದ್ದೇವೆ. ತಿನ್ನೋಕೆ ಊಟವಿಲ್ಲ. ಕುಡಿಯೋಕೆ ನೀರಿನ ವ್ಯವಸ್ಥೆಯಿಲ್ಲ ಎಂದು ಲಾರಿ ಚಾಲಕನೊಬ್ಬ ತನ್ನ ಅಳಲು ತೋಡಿಕೊಂಡಿದ್ದಾನೆ.
‘ಸಾಮ್ರಾಟ’ರಿಗೊಂದು ನ್ಯಾಯ, ಪ್ರಜೆಗಳಿಗೆ ಬೇರೆ ನ್ಯಾಯ: ಸಚಿವರ ವಾಹನಕ್ಕೆ ಬ್ರಿಡ್ಜ್ ಮುಕ್ತ ಮುಕ್ತ
Published On - 3:18 pm, Fri, 16 October 20