ಕಲಬುರಗಿ: ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾಗಿಣಾ ನದಿ ತುಂಬಿ ಹರಿಯುತ್ತಿದೆ. ಮಳಖೇಡ, ದಂಡೋತಿ ಕಾಚೂರು ಬಳಿಯ ಸೇತುವೆಗಳು ಮುಳುಗಿವೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಸೇಡಂ, ಕಾಚೂರು ಸೇಡಂ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಾಗೂ ಮಳಖೇಡದ ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದೆ.
ಇನ್ನು ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದ ಹಲವು ಬಡಾವಣೆಗಳಿಗೆ ಮುಲ್ಲಾಮಾರಿ ನದಿಯ ನೀರು ನುಗ್ಗಿದೆ. ಇದರಿಂದ ಜನ ಜೀವನ ಕಷ್ಟವಾಗಿದೆ. ಬೆನಕನಹಳ್ಳಿ ಗ್ರಾಮ ಮಳೆಗೆ ಜಲಾವೃತಗೊಂಡಿದೆ. ಮನೆಗಳಿಗೆ ನಿರು ನುಗ್ಗಿದ ಪರಿಣಾಮ ರಾತ್ರಿಯೆಲ್ಲ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ಮಳೆ ನೀರಿಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಹೊಲ ಗದ್ದೆಗಳಿಗೆ ನೀರು ನುಗ್ಗಿದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.