ವಾಕಿಂಗ್‌ಗೆ ಹೋಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ
ದಕ್ಷಿಣ ಕನ್ನಡ: ವಾಕಿಂಗ್ ಹೋಗಿದ್ದ ವೇಳೆ, ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ, ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ, ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ವಾಸು ಮೂಲ್ಯ(65) ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಮೃತ ವ್ಯಕ್ತಿ ವೃತ್ತಿಯಲ್ಲಿ ಟ್ಯಾಕ್ಸಿ ಚಾಲಕನಾಗಿದ್ದು, ಮುಂಜಾನೆ ವೇಳೆ ವಾಕಿಂಗ್ ಹೋಗಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿ ಅಲ್ಲಿಂದ ಪರಾರಿಯಾಗಿದ್ದರು. ಹಲ್ಲೆಗೊಳಗಾಗಿದ್ದ ವಾಸು […]

ದಕ್ಷಿಣ ಕನ್ನಡ: ವಾಕಿಂಗ್ ಹೋಗಿದ್ದ ವೇಳೆ, ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ, ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಜೂನಿಯರ್ ಕಾಲೇಜು ರಸ್ತೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ, ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ವಾಸು ಮೂಲ್ಯ(65) ಕೊಲೆಯಾದ ದುರ್ದೈವಿ ಎನ್ನಲಾಗಿದೆ. ಮೃತ ವ್ಯಕ್ತಿ ವೃತ್ತಿಯಲ್ಲಿ ಟ್ಯಾಕ್ಸಿ ಚಾಲಕನಾಗಿದ್ದು, ಮುಂಜಾನೆ ವೇಳೆ ವಾಕಿಂಗ್ ಹೋಗಿದ್ದ ಸಮಯದಲ್ಲಿ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿ ಅಲ್ಲಿಂದ ಪರಾರಿಯಾಗಿದ್ದರು.
ಹಲ್ಲೆಗೊಳಗಾಗಿದ್ದ ವಾಸು ಮೂಲ್ಯನನ್ನು, ಸ್ಥಳೀಯರ ನೆರವಿನಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇನ್ನು ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪಿಎಸ್ಐ ನಂದಕುಮಾರ್, ಇನ್ಸ್‌ಪೆಕ್ಟರ್ ಸಂದೇಶ್ಪಿ .ಜಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




