C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ -ಸಿಎಂ BSY ಭರವಸೆ
C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸದ್ಯ, ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: C.P.ಯೋಗೇಶ್ವರ್‌ರನ್ನ ನೂರಕ್ಕೆ ನೂರರಷ್ಟು ಮಂತ್ರಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸದ್ಯ, ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಜೊತೆಗೆ, H.ವಿಶ್ವನಾಥ್ ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ನಿರಾಕರಿಸಿದರು.
ಇತ್ತ, ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ MLC C.P.ಯೋಗೇಶ್ವರ್ ಮಂತ್ರಿ ಮಾಡುವುದಾಗಿ ಸಿಎಂ ಹೇಳಿದ್ದಕ್ಕೆ ಧನ್ಯವಾದ. ಎಂದು ಟಿವಿ9 ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಸಿಎಂ ಬಿಎಸ್‌ವೈ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಆಭಾರಿ. ಒಬ್ಬ ವ್ಯಕ್ತಿಯಿಂದ ನಾನು ಮಂತ್ರಿಯಾಗುತ್ತಿಲ್ಲ. ಸಚಿವ ರಮೇಶ್ ಜಾರಕಿಹೊಳಿ ನನ್ನ ಒಳ್ಳೆಯ ಸ್ನೇಹಿತರು ಎಂದು ಟಿವಿ9ಗೆ MLC ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡಿಸುವಲ್ಲಿ ಸಾಹುಕಾರ್ ಸಕ್ಸಸ್ ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನ ನೀಡುವಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಠಕ್ಕೆ ಬಿದ್ದು ಕಡೆಗೂ ಸಿ.ಪಿ ಯೋಗೇಶ್ವರ್ಗೆ ಸಚಿವ ಸ್ಥಾನ ಕೊಡಿಸಲು ಸಕ್ಸಸ್ ಆಗಿದ್ದಾರೆ ಎಂಬ ಮಾತು ಕೇಳಿಬಂದಿದೆ. ಸತತ ಒಂದು ವಾರದ ಕಾಲ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ರಮೇಶ್ ಜಾರಕಿಹೊಳಿ ಸಿ.ಪಿ.ಯೋಗೇಶ್ವರ್ಗೆ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು ಎಂದು ಹೇಳಲಾಗಿದೆ. ಇದೀಗ, ರಮೇಶ್ ಜಾರಕಿಹೊಳಿ ಲಾಬಿಗೆ ಬಿಜೆಪಿ ವರಿಷ್ಠರು ಮತ್ತು ಸಿಎಂ ಯಡಿಯೂರಪ್ಪ ಮಣಿದಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಸಿ.ಪಿ.ಯೋಗೀಶ್ವರ್ಗೆ ಸಚಿವ ಸ್ಥಾನ ನೀಡದಿದ್ದರೆ ಯಾವ ತ್ಯಾಗಕ್ಕೂ ಸಿದ್ಧ ಎಂಬ ಸಾಹುಕಾರ್ ಎಚ್ಚರಿಕೆಗೆ ಮಣಿದ ವರಿಷ್ಠರು ಹಾಗೂ ಸಿಎಂ ಯಡಿಯೂರಪ್ಪ ಕೊನೆಗೂ ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಯೋಗೇಶ್ವರ್ ಹೆಸರು ಬಹಿರಂಗ ಪಡಿಸಿದ್ದಾರೆ. ಇದೀಗ, ದಿನೇ ದಿನೆ ಸರ್ಕಾರದಲ್ಲಿ ಪ್ರಭಾವಿ ನಾಯಕನಾಗಿ ಬೆಳೆಯುತ್ತಿರುವ ಸಚಿವ ರಮೇಶ್ ಜಾರಕಿಹೊಳಿಗೆ ಈ ಘೋಷಣೆ ಮತ್ತಷ್ಟು ಬಲ ತಂದುಕೊಟ್ಟಿದೆ.
Published On - 11:32 am, Tue, 1 December 20