ಬೆಂಗಳೂರು: ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿಲ್ಲ, ರೈತರ ಪ್ರತಿಭಟನೆಯನ್ನು ಹತ್ತಿಕ್ಕಿಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆಸಿದ್ದಾರೆ.
ರೈತರು ರಾಜಧಾನಿಗೆ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದಕ್ಕೆ ಉತ್ತರಿಸಿದ ಬಿಎಸ್ವೈ ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ, ರೈತರ ಪ್ರತಿಭಟನೆಯನ್ನು ಹತ್ತಿಕ್ಕಿಲ್ಲ ಎಂದಿದ್ದಾರೆ.
ಈ ವೇಳೆ ಮಾತನಾಡಿದ ಅವರು ಟ್ರ್ಯಾಕ್ಟರ್ ಮೆರವಣಿಗೆಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತೆ. ಹೀಗಾಗಿ ಟ್ರ್ಯಾಕ್ಟರ್‌ಗಳು ಬೇಡ ಎಂದು ಹೇಳಿದ್ದೇವೆ. ಪ್ರತಿಭಟನಾಕಾರರು ಯಾವ ಕಾರಣಕ್ಕೆ ಪ್ರತಿಭಟನೆ ಮಾಡ್ತಿದ್ದಾರೆಂದು ಹೇಳುತ್ತಿಲ್ಲ. ಕೇವಲ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅಷ್ಟೆ. ನನ್ನ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ. ರೈತ ಮುಖಂಡರು ನಮ್ಮ ಮನೆಗೆ ಬಂದು ಚರ್ಚಿಸಬಹುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Published On - 10:56 am, Tue, 26 January 21