ಮಾರ್ಚ್ 5ರಂದು ರಾಜ್ಯ ಬಜೆಟ್, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಬೆಂಗಳೂರು: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದಿನಿಂದ ಸಿಎಂ ಬಿಎಸ್ ಯಡಿಯೂರಪ್ಪರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಬೆಂಗಳೂರಿನ ಶಕ್ತಿಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4.45ರವರೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲು ಸಿಎಂ ಚಿಂತಿಸಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಭೆಯಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ & ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ಕೃಷಿ, ಸಾರಿಗೆ, ತೋಟಗಾರಿಕೆ, ವಸತಿ, ಕಂದಾಯ ಇಲಾಖೆಗಳ ಜೊತೆ ಸಭೆ ನಡೆಸಿ […]
ಬೆಂಗಳೂರು: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದಿನಿಂದ ಸಿಎಂ ಬಿಎಸ್ ಯಡಿಯೂರಪ್ಪರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಬೆಂಗಳೂರಿನ ಶಕ್ತಿಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4.45ರವರೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲು ಸಿಎಂ ಚಿಂತಿಸಿದ್ದಾರೆ.
ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಭೆಯಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ & ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ಕೃಷಿ, ಸಾರಿಗೆ, ತೋಟಗಾರಿಕೆ, ವಸತಿ, ಕಂದಾಯ ಇಲಾಖೆಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.
ಹಿಂದಿನ ಬಜೆಟ್‌ನಲ್ಲಿ ಇಲಾಖೆಗಳಿಗೆ ಮೀಸಲಿಟ್ಟಿರುವ ಹಣ ಹಾಗೂ ಮುಂದಿನ ಬಜೆಟ್‌ನಲ್ಲಿ ಬೇಕಾಗಿರುವ ಹಣದ ಬಗ್ಗೆ ಚರ್ಚೆ ನಡೆಯಲಿದೆ. ಇದರ ಜೊತೆಗೆ ಹೊಸ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲು ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ.
ಫೆಬ್ರವರಿ 6ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಬಜೆಟ್ ಪೂರ್ವಭಾವಿ ಸಭೆ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಿಎಸ್‌ವೈ ಭೇಟಿ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕಾಗಿ ಬಿಎಸ್‌ವೈ ಮೇಲೆ ಒತ್ತಡ ಹಾಕುವ ಸಾಧ್ಯತೆ ಕೂಡ ಹೆಚ್ಚಿದೆ.
Published On - 8:24 am, Mon, 3 February 20