
ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.
ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.