Budget 2021: ಬಜೆಟ್ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭ
ಕೇಂದ್ರ ಸರ್ಕಾರ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಹೀಗಾಗಿ, ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಮುಂದುವರೆಯುವ ನಿರೀಕ್ಷೆ ಇದೆ.

ಲಾಭದ ನಗದು
ಮುಂಬೈ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಒತ್ತು ನೀಡುವ ಭರವಸೆ ನೀಡಿದ್ದಾರೆ ನಿರ್ಮಲಾ. ಈ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭವಾಗಿದೆ.
11:2.3ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 665 ಅಂಶಗಳಷ್ಟು ಏರಿಕೆ ಕಂಡಿದ್ದು 46,951.69 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 176.50 ಅಂಶಗಳಷ್ಟು ಏರಿಕೆ ದಾಖಲಿಸಿದೆ. 13,809ರ ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ ಬ್ಯಾಂಕ್ 810 ಅಂಕ ಏರಿಕೆ ಕಂಡು 31,377 ಆಗಿದೆ.
ಕೇಂದ್ರ ಸರ್ಕಾರ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಹೀಗಾಗಿ, ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಮುಂದುವರೆಯುವ ನಿರೀಕ್ಷೆ ಇದೆ.