AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಎಂಸಿಎಕ್ಸ್​ನಲ್ಲಿ ಚಿನ್ನದ ಬೆಲೆ ಶೇ.3 ಅಂದರೆ 10 ಗ್ರಾಂ. ಸುಮಾರು 1500 ರೂ.ಕುಸಿದಿದೆ.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 6:04 PM

Share

ಚಿನ್ನ ಮತ್ತು ಬೆಳ್ಳಿಯ ಮೇಲಿನ ಸೀಮಾ ಸುಂಕವನ್ನು (Customs Duty) ಕಡಿಮೆ ಮಾಡುವುದಾಗಿ ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಸದ್ಯ ಚಿನ್ನ ಹಾಗೂ ಬೆಳ್ಳಿಯ ಮೇಲೆ ಶೇ 12.5ರಷ್ಟು ಆಮದು ಸುಂಕ ವಿಧಿಸಲಾಗುತ್ತಿದ್ದು, ಇದನ್ನು ಶೇ 7.5ಕ್ಕೆ ಇಳಿಕೆ ಮಾಡಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಚಿನ್ನ-ಬೆಳ್ಳಿಯ ಮೇಲಿನ ಆಮದು ಸುಂಕ 2019ರ ಜುಲೈವರೆಗೆ ಶೇ 10ರಷ್ಟಿತ್ತು. ಜುಲೈನಲ್ಲಿ ಅದನ್ನು ಶೇ 12.5ಕ್ಕೆ ಏರಿಸಲಾಗಿತ್ತು. ಆದಗಿನಿಂದಲೂ ಕಸ್ಟಮ್ಸ್​ ಸುಂಕ​ ಕಡಿಮೆ ಮಾಡುವಂತೆ ಚಿನ್ನದ ಉದ್ಯಮಿಗಳು ಒತ್ತಾಯಿಸುತ್ತಲೇ ಇದ್ದರು. ಆದರೆ ಸದ್ಯಕ್ಕಂತೂ ಸೀಮಾ ಶುಲ್ಕ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈಗ ಚಿನ್ನದ ಬೆಲೆ ಸತತವಾಗಿ ಏರುತ್ತಿರುವ ಬೆನ್ನಲ್ಲೇ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಎಂಸಿಎಕ್ಸ್​) ಚಿನ್ನದ ಬೆಲೆ ಶೇ 3 ಅಂದರೆ 10 ಗ್ರಾಂಗೆ ಸುಮಾರು ₹ 1500ಕ್ಕೆ ಕುಸಿಯಿತು. ಪ್ರಸ್ತುತ ₹ 47,918ಕ್ಕೆ ವಹಿವಾಟು ನಡೆಯುತ್ತಿದೆ.

Gold Silver Price ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿತ.. ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಂದು?

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Published On - 3:25 pm, Mon, 1 February 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್