ಶಿರಾ ಗೆದ್ದ BY ವಿಜಯೇಂದ್ರ ಚಿತ್ತ ಇನ್ನು ಬಸವಕಲ್ಯಾಣದತ್ತ..
ಕಲಬುರ್ಗಿ: ಶಿರಾ ಕ್ಷೇತದ ಗೆಲುವಿನ ಖುಷಿಯಲ್ಲಿರುವ ಬಿ.ಎಸ್. ವೈ ಪುತ್ರ ಬಿ.ವೈ ವಿಜಯೇಂದ್ರ ಇಂದು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದಾರೆ. ಈ ವಿಚಾರವಾಗಿ ಕಲಬುರ್ಗಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ.. ರಾಜ್ಯ ಉಪಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಲಬುರ್ಗಿಗೆ ಬಂದಿದ್ದೇನೆ. ಈ ಹಿಂದೆ 15 ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. 15 ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತಗಳಲ್ಲಿ ಬಿಜೆಪಿ ಗೆದ್ದಿದೆ. ಅದರಲ್ಲಿ ಶಿರಾ ಕ್ಷೇತ್ರ ನಮಗೆ ದೊಡ್ಡ ಸವಾಲಾಗಿತ್ತು […]

ಕಲಬುರ್ಗಿ: ಶಿರಾ ಕ್ಷೇತದ ಗೆಲುವಿನ ಖುಷಿಯಲ್ಲಿರುವ ಬಿ.ಎಸ್. ವೈ ಪುತ್ರ ಬಿ.ವೈ ವಿಜಯೇಂದ್ರ ಇಂದು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದಾರೆ.
ಈ ವಿಚಾರವಾಗಿ ಕಲಬುರ್ಗಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ.. ರಾಜ್ಯ ಉಪಾಧ್ಯಕ್ಷನಾದ ನಂತರ ಮೊದಲ ಬಾರಿಗೆ ಕಲಬುರ್ಗಿಗೆ ಬಂದಿದ್ದೇನೆ. ಈ ಹಿಂದೆ 15 ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. 15 ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತಗಳಲ್ಲಿ ಬಿಜೆಪಿ ಗೆದ್ದಿದೆ. ಅದರಲ್ಲಿ ಶಿರಾ ಕ್ಷೇತ್ರ ನಮಗೆ ದೊಡ್ಡ ಸವಾಲಾಗಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ.
ಯಡಿಯೂರಪ್ಪ ಅವರ ಕೆಲಸಗಳೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡ್ತಿವೆ. ಆದ್ರೆ ಬಿಜೆಪಿ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿರೋದ್ರಿಂದ 2 ಕ್ಷೇತಗಳಲ್ಲೂ ಕಮಲ ಅರಳಿದೆ. ಅಲ್ಲದೆ ಎಲ್ಲಿಯೇ ಹೋದ್ರೂ ಕಮಲ ಅರಳುತ್ತೆ ಅನ್ನೋ ವಿಶ್ವಾಸವಿದೆ. ಯಡಿಯೂರಪ್ಪ ಅವರ ಕೆಲಸಗಳೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆ ಎಂದಿದ್ದಾರೆ.
ಯಾವ ಕ್ಷೇತ್ರದ ಜವಾಬ್ದಾರಿ ಕೊಟ್ಟರೂ ಅದನ್ನು ನಾನು ವಹಿಸಿಕೊಳ್ತೇನೆ.. ಬರುವ ದಿನಗಳಲ್ಲಿ ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರಗಳಲ್ಲಿ ಉಪ ಚುನಾವಣೆ ಬರಲಿದೆ. ಹಾಗಾಗಿ ಬಸವಕಲ್ಯಾಣದಲ್ಲಿ ಇಂದು ಮುಖಂಡರನ್ನು ಭೇಟಿಯಾಗಿ ಬೆಂಗಳೂರಿಗೆ ವಾಪಸ್ಸಾಗ್ತೇನೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷರು ಯಾವ ಕ್ಷೇತ್ರದ ಜವಾಬ್ದಾರಿ ಕೊಟ್ಟರೂ ಅದನ್ನು ನಾನು ವಹಿಸಿಕೊಳ್ತೇನೆ. ಅಲ್ಲದೆ ಬಸವಕಲ್ಯಾಣ ಕ್ಷೇತದ ಟಿಕೆಟ್ ಆಕಾಂಕ್ಷಿಯಂತೂ ನಾನಲ್ಲ ಎಂದಿದ್ದಾರೆ.
ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಹೀಗಾಗಿ ಪಕ್ಷದ ಹೈಕಮಾಂಡ್ ನಿರ್ಣಯಿಸುವ ಅಭ್ಯರ್ಥಿ ಪರ ನಾವು ಜವಾಬ್ದಾರಿಯುತವಾಗಿ ಕೆಲಸ ಮಾಡ್ತೇವೆ ಎಂದು ಕಲಬುರ್ಗಿಯಲ್ಲಿ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.