Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌನವಾಗಿದ್ದ ಬೇಗ್ ಇದ್ದಕ್ಕಿದ್ದಂತೆ SDPIಯಿಂದ ದೂರ ಇರುವುದೇಕೆ? ಇದು ಶಾಸಕ ಜಮೀರ್ ಖಾರಾಬಾತ್!

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರೋಷನ್​ ಬೇಗ್​ ನೀಡಿದ್ದ ಹೇಳಿಕೆಗೆ ಶಾಸಕ ಜಮೀರ್ ಅಹಮದ್​ ಟ್ವಿಟರ್​ ಮೂಲಕ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್​ ಬೇಗ್​ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ ಎಂದು ಶಾಸಕ ಜಮೀರ್ ಟ್ವೀಟ್​ ಮಾಡಿದ್ದಾರೆ. ‘SDPI […]

ಮೌನವಾಗಿದ್ದ ಬೇಗ್ ಇದ್ದಕ್ಕಿದ್ದಂತೆ SDPIಯಿಂದ ದೂರ ಇರುವುದೇಕೆ? ಇದು ಶಾಸಕ ಜಮೀರ್ ಖಾರಾಬಾತ್!
Follow us
KUSHAL V
|

Updated on: Aug 17, 2020 | 5:29 PM

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರೋಷನ್​ ಬೇಗ್​ ನೀಡಿದ್ದ ಹೇಳಿಕೆಗೆ ಶಾಸಕ ಜಮೀರ್ ಅಹಮದ್​ ಟ್ವಿಟರ್​ ಮೂಲಕ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್​ ಬೇಗ್​ ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ ಎಂದು ಶಾಸಕ ಜಮೀರ್ ಟ್ವೀಟ್​ ಮಾಡಿದ್ದಾರೆ.

‘SDPI ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು?’ ಶಿವಾಜಿನಗರದಲ್ಲಿ ಬೇಗ್ ಅವರು ಸ್ಪರ್ಧಿಸುತ್ತಿದ್ದಾಗ ಎಂದೂ ಸ್ಪರ್ಧಿಸದಿದ್ದ SDPI ಇತ್ತೀಚಿನ ಶಿವಾಜಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿದದ್ದು ಯಾಕೆ? ಕಾಂಗ್ರೆಸ್ ಬೆಂಬಲಿಸುವ ಮುಸ್ಲಿಂ ಮತಗಳನ್ನು ವಿಭಜಿಸುವ ದುರುದ್ದೇಶದಿಂದ SDPI ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು ಎನ್ನುವುದನ್ನು ಬೇಗ್ ತಿಳಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಡಿ.ಜೆ ಹಳ್ಳಿ ಗಲಭೆ ಬಗ್ಗೆ ಇಲ್ಲಿಯವರೆಗೆ ಮೌನವಹಿಸಿದ್ದ ರೋಷನ್​ ಬೇಗ್ ಅವರು ಇದ್ದಕ್ಕಿದ್ದ ಹಾಗೆ SDPIಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನ ಪಡುತ್ತಿರುವುದು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದನ್ನು ಕಂಡಾಗ ಪೊಲೀಸರ ತನಿಖೆಯ ಸುಳಿವು ಅವರಿಗೆ ಸಿಕ್ಕ ಹಾಗೆ ಕಾಣುತ್ತಿದೆ. ಪ್ರವಾದಿಯವರನ್ನು ಅವಹೇಳನ ಮಾಡಿರುವ ನವೀನ್ ಎಂಬ ಆರೋಪಿಯ ಕುಕೃತ್ಯವನ್ನು ಕನಿಷ್ಠ ಖಂಡಿಸುವ ಧೈರ್ಯ ತೋರದ ರೋಷನ್​ ಬೇಗ್ ಅವರು ಕಾಂಗ್ರೆಸ್ ಮತ್ತು SDPI ಸಂಬಂಧದ ಕತೆ ಹೆಣೆಯುತ್ತಿರುವುದು ಅವರ ಆತ್ಮವಂಚಕ ನಡವಳಿಕೆಗೆ ಸರಿಯಾಗಿ ಹೊಂದಿಕೊಳ್ಳುತ್ತಿದೆ ಎಂದು ಜಮೀರ್​ ಟೀಕಿಸಿದ್ದಾರೆ.

ಮಾನ್ಯ ರೋಷನ್​ ಬೇಗ್ ಅವರೇ, ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ. ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ರೋಷನ್​ ಬೇಗ್​ಗೆ ಶಾಸಕ ಜಮೀರ್​ ಟಾಂಗ್​​ ನೀಡಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ