SSLC ಡ್ಯೂಟಿ ಮುಗಿಸಿ ಬರುವಾಗ ಅಪಘಾತ, 3 ಶಿಕ್ಷಕರಿಗೆ ಗಂಭೀರ ಗಾಯ
ಗದಗ: ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮೂವರು ಶಿಕ್ಷಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ನರ್ಸಾಪುರ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು. ಗಾಯಾಳು ಶಿಕ್ಷಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಗಾಯಾಳು ಶಿಕ್ಷಕರ ಆರೋಗ್ಯ ವಿಚಾರಿಸಿದ್ದಾರೆ. ಬೆಟಗೇರಿ ಪೊಲೀಸ್ […]
ಗದಗ: ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿಯೊಡೆದಿದೆ. ಅಪಘಾತದಲ್ಲಿ ಮೂವರು ಶಿಕ್ಷಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ನರ್ಸಾಪುರ ಗ್ರಾಮದ ಬಳಿ ನಡೆದಿದೆ.
ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು. ಗಾಯಾಳು ಶಿಕ್ಷಕರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಗಾಯಾಳು ಶಿಕ್ಷಕರ ಆರೋಗ್ಯ ವಿಚಾರಿಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.