ತಾಂತ್ರಿಕ ದೋಷದಿಂದ ಕಾರು ಭಸ್ಮ, ನಾಲ್ವರು ಪ್ರಾಣಾಪಾಯದಿಂದ ಪಾರು

ಬಳ್ಳಾರಿ : ತಾಂತ್ರಿಕ ದೋಷದಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಾರಕನಾಳ್ ಸಣ್ಣ ತಾಂಡಾ ಬಳಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ನಾಲ್ವರು ತಕ್ಷಣವೇ ಕಾರಿನಿಂದ ಇಳಿದು ಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಟಾಟಾ ಇಂಡಿಕಾ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದವರು ಹರಪನಹಳ್ಳಿಯಿಂದ ವಿಂಡ್ ಫ್ಯಾನ್ ಘಟಕಕ್ಕೆ ಕೆಲಸಕ್ಕಾಗಿ ಹೋಗುತ್ತಿದ್ದರು. ಈ ವೇಳೆ ಈ ಅವಘಡ […]

ತಾಂತ್ರಿಕ ದೋಷದಿಂದ ಕಾರು ಭಸ್ಮ, ನಾಲ್ವರು ಪ್ರಾಣಾಪಾಯದಿಂದ ಪಾರು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 03, 2020 | 11:21 AM

ಬಳ್ಳಾರಿ : ತಾಂತ್ರಿಕ ದೋಷದಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹಾರಕನಾಳ್ ಸಣ್ಣ ತಾಂಡಾ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ನಾಲ್ವರು ತಕ್ಷಣವೇ ಕಾರಿನಿಂದ ಇಳಿದು ಬಂದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಟಾಟಾ ಇಂಡಿಕಾ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾರಿನಲ್ಲಿದ್ದವರು ಹರಪನಹಳ್ಳಿಯಿಂದ ವಿಂಡ್ ಫ್ಯಾನ್ ಘಟಕಕ್ಕೆ ಕೆಲಸಕ್ಕಾಗಿ ಹೋಗುತ್ತಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us