ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರೀತು ವ್ಯಾನ್
ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್ನಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ […]
ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ.
ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್ನಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.