ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರೀತು ವ್ಯಾನ್

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ […]

ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರೀತು ವ್ಯಾನ್

Updated on: Oct 25, 2020 | 3:00 PM

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ.

ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.