ಟಿಪ್ಪರ್ ಡಿಕ್ಕಿ: ದಂಪತಿ ಸೇರಿ ಮೂವರು ಸಾವು, ಪವಾಡವೆಂಬಂತೆ ಮಗು ಪಾರು!
ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಬೋರಗಟ್ಟಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯೊಡೆದು ಕಾರು ಚಾಲಕ ಸೇರಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಡಿಕೇರಿಯಿಂದ ಇಳಕಲ್ಗೆ ವಾಪಸ್ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 50ರ ಬೋರಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರು ಇಳಕಲ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಬದುಕುಳಿದ ಮಗುವನ್ನು ಹಾಗೂ ಮೃತರನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಬೋರಗಟ್ಟಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯೊಡೆದು ಕಾರು ಚಾಲಕ ಸೇರಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಅಪಘಾತದಲ್ಲಿ ದಂಪತಿಯ ಮಗು ಪ್ರಾಣಾಪಾಯದಿಂದ ಪಾರಾಗಿದೆ.
ಮಡಿಕೇರಿಯಿಂದ ಇಳಕಲ್ಗೆ ವಾಪಸ್ ಹೋಗುವಾಗ ರಾಷ್ಟ್ರೀಯ ಹೆದ್ದಾರಿ 50ರ ಬೋರಗಟ್ಟಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರು ಇಳಕಲ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಬದುಕುಳಿದ ಮಗುವನ್ನು ಹಾಗೂ ಮೃತರನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
Published On - 11:30 am, Mon, 3 February 20