ಡಿವೈಡರ್ ಮೇಲೆ ಹಾರಿ, ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
ರಾಮನಗರ: ಡಿವೈಡರ್ ಮೇಲೆ ಹಾರಿ ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಸೀಬನಹಳ್ಳಿಯ ರಾಹುಲ್(18), ಅಭಿಷೇಕ್(21) ಮೃತರು. ಮತ್ತೊಬ್ಬ ಸವಾರ ಹರ್ಷಿತ್‌ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ನಿಮಾನ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ನಿವಾಸಿಗಳು. ಇವರು ಮೈಸೂರಿನಿಂದ ಚನ್ನಪಟ್ಟಣಕ್ಕೆ ಬರುತ್ತಿದ್ದ ವೇಳೆ, ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ ಮೇಲಿಂದ ಹಾರಿ […]

ರಾಮನಗರ: ಡಿವೈಡರ್ ಮೇಲೆ ಹಾರಿ ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಸೀಬನಹಳ್ಳಿಯ ರಾಹುಲ್(18), ಅಭಿಷೇಕ್(21) ಮೃತರು. ಮತ್ತೊಬ್ಬ ಸವಾರ ಹರ್ಷಿತ್‌ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ನಿಮಾನ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ನಿವಾಸಿಗಳು. ಇವರು ಮೈಸೂರಿನಿಂದ ಚನ್ನಪಟ್ಟಣಕ್ಕೆ ಬರುತ್ತಿದ್ದ ವೇಳೆ, ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ ಮೇಲಿಂದ ಹಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:37 am, Fri, 31 January 20




