ಡಿವೈಡರ್‌ ಮೇಲೆ ಹಾರಿ, ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ರಾಮನಗರ: ಡಿವೈಡರ್‌ ಮೇಲೆ ಹಾರಿ ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಸೀಬನಹಳ್ಳಿಯ ರಾಹುಲ್(18), ಅಭಿಷೇಕ್(21) ಮೃತರು. ಮತ್ತೊಬ್ಬ ಸವಾರ ಹರ್ಷಿತ್‌ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ನಿಮಾನ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ‌ನಿವಾಸಿಗಳು. ಇವರು ಮೈಸೂರಿನಿಂದ ಚನ್ನಪಟ್ಟಣಕ್ಕೆ ಬರುತ್ತಿದ್ದ ವೇಳೆ, ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ ಮೇಲಿಂದ ಹಾರಿ […]

ಡಿವೈಡರ್‌ ಮೇಲೆ ಹಾರಿ, ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
ಸಾಧು ಶ್ರೀನಾಥ್​

Updated on: Jan 31, 2020 | 11:07 AM

ರಾಮನಗರ: ಡಿವೈಡರ್‌ ಮೇಲೆ ಹಾರಿ ಎದುರಿಗೆ ಬರ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಸೀಬನಹಳ್ಳಿಯ ರಾಹುಲ್(18), ಅಭಿಷೇಕ್(21) ಮೃತರು. ಮತ್ತೊಬ್ಬ ಸವಾರ ಹರ್ಷಿತ್‌ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ನಿಮಾನ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ‌ನಿವಾಸಿಗಳು. ಇವರು ಮೈಸೂರಿನಿಂದ ಚನ್ನಪಟ್ಟಣಕ್ಕೆ ಬರುತ್ತಿದ್ದ ವೇಳೆ, ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ ಮೇಲಿಂದ ಹಾರಿ ಬೈಕಿಗೆ ಡಿಕ್ಕಿ ಹೊಡೆದಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 9:37 am, Fri, 31 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us