ಡಿವೈಡರ್ ಹಾರಿದ ಕಾರು ಲಾರಿಗೆ ಡಿಕ್ಕಿ, ಕಾರಿನಲ್ಲಿದ್ದ ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ಸಾವು

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಾವಿಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಇನ್ನಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಅಪಘಾತಕ್ಕೀಡಾದ ವಾಹನದಲ್ಲಿರೋ ಮೃತ ದೇಹ ತೆಗೆಯಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಇಬ್ಬರು ಸ್ಥಳದಲ್ಲೇ […]

ಡಿವೈಡರ್ ಹಾರಿದ ಕಾರು ಲಾರಿಗೆ ಡಿಕ್ಕಿ, ಕಾರಿನಲ್ಲಿದ್ದ ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ಸಾವು

Updated on: Aug 27, 2020 | 1:12 PM

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಬಾವಿಕೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಕಾರು, ಲಾರಿಗೆ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಇನ್ನಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ. ಅಪಘಾತಕ್ಕೀಡಾದ ವಾಹನದಲ್ಲಿರೋ ಮೃತ ದೇಹ ತೆಗೆಯಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಇಬ್ಬರು ಸ್ಥಳದಲ್ಲೇ ವಿಧಿವಶ
ಮೃತರಿಬ್ಬರೂ ಬೆಂಗಳೂರಿನ ಮಂಜುನಾಥನಗರ ನಿವಾಸಿಗಳು. ಮೃತರನ್ನು ಚೇತನ್ (22) ಮತ್ತು ಆದಿ (19)  ಎಂದು ಗುರುತಿಸಲಾಗಿದೆ. ಇನ್ನು ಚಂದು (19) ಮತ್ತು  ‌ನವೀನ್ (19) ಗಾಯಾಳುಗಳು.


Published On - 12:34 pm, Thu, 27 August 20