
ಬೆಂಗಳೂರು: ನಗರದಲ್ಲಿ ರ‍್ಯಾಶ್ ಡ್ರೈವಿಂಗ್ಗೆ ಅಪರಿಚಿತ ಪಾದಚಾರಿ ಬಲಿಯಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದು ಡಸ್ಟರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಪಘಾತ ಸಂಬಂಧ ಸತೀಶ್ ಎಂಬುವನನ್ನು ಯಲಹಂಕ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Published On - 5:36 pm, Wed, 27 May 20