ನಾಳೆ ಬರ್ತ್​​ಡೇ.. ಇಂದು ವಿನಯ್ ಕುಲಕರ್ಣಿ ಸೋದರರಿಗೆ ಸಿಬಿಐ ‘ಪಾರ್ಟಿ’

|

Updated on: Nov 05, 2020 | 9:50 AM

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ […]

ನಾಳೆ ಬರ್ತ್​​ಡೇ.. ಇಂದು ವಿನಯ್ ಕುಲಕರ್ಣಿ ಸೋದರರಿಗೆ ಸಿಬಿಐ ‘ಪಾರ್ಟಿ’
Follow us on

ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಈಗ ಈ ಸಂಬಂಧ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ವಿನಯ್ ಕುಲಕರ್ಣಿ ಹುಟ್ಟುಹಬ್ಬಕ್ಕೆ ಶಾಕ್ ಕೊಟ್ಟ ಸಿಬಿಐ:
ಇನ್ನು ಜನ್ಮದಿನಕ್ಕೂ ಮುಂಚೆಯೇ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆಯಲಾಗಿದೆ. ತಮ್ಮನಂತೆ ಅಣ್ಣನಿಗೂ ಜನ್ಮದಿನ ಮುಂಚೆಯೇ ಸಿಬಿಐ ವಿಚಾರಣೆ ನಡೆಯುತ್ತಿದೆ. ನವೆಂಬರ್ 7ರಂದು ಜನ್ಮದಿನ ಆಚರಿಸಿಕೊಳ್ಳಲಿದ್ದ ವಿನಯ್ ಕುಲಕರ್ಣಿ ಸದ್ಯ ಸಿಬಿಐ ವಶದಲ್ಲಿದ್ದಾರೆ. ಈ ಹಿಂದೆ ಸೋದರ ವಿಜಯ್ ಕುಲಕರ್ಣಿಗೂ ಬರ್ತ್ ಡೇ ಕಂಟಕವಾಗಿತ್ತು. ಜನ್ಮದಿನ ಮುಂಚೆಯೇ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದರು. ಹೀಗಾಗಿ ಕುಲಕರ್ಣಿ ಸೋದರರಿಗೆ ಹುಟ್ಟುಹಬ್ಬ ಮಹಾ ಕಂಟಕವಾಗಿದೆ.

Published On - 7:38 am, Thu, 5 November 20