ಬೆಟ್ಟಿಂಗ್ ದಂಧೆ ಮೇಲೆ ದಾಳಿ ನಡೆಸಿದ ಪೊಲೀಸರು: ಒಬ್ಬನ ಬಂಧನ
ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಟೆಸ್ಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಆರೋಪಿ ಶಶಿಕುಮಾರ್ನನ್ನು ಬಂಧಿಸಿದ್ದಾರೆ.
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿರುವವರ ಮೇಲೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಭಾರತ–ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಶಶಿಕುಮಾರ್ನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹ 2.5 ಲಕ್ಷ ನಗದು ಮತ್ತು ಒಂದು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ