AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ. ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ […]

RTO ಕಚೇರಿಗೂ ಸ್ಯಾಂಡಲ್‌ವುಡ್‌ ಡ್ರಗ್ಸ್‌ ನಂಟು? ಬಿರುಗಾಳಿ ಎಬ್ಬಿಸಿದ ಗುಮಾಸ್ತನ ವಿಚಾರಣೆ
Guru
Guru|

Updated on: Sep 02, 2020 | 11:26 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು ವಿಚಾರ ಇಡೀ ಕನ್ನಡ ಚಲನಚಿತ್ರರಂಗವನ್ನೇ ಅಲ್ಲಾಡಿಸಿದ ಬೆನ್ನಲ್ಲೇ ಈಗ ಈ ನಂಟು ಆರ್‌ಟಿಓ ಡಿಪಾರ್ಟ್‌ಮೆಂಟ್‌ಗೂ ಹಬ್ಬಿದೆಯಾ ಎನ್ನೋ ಅನುಮಾನಗಳು ಶುರುವಾಗಿವೆ.

ಇವತ್ತು ಜಯನಗರ ಆರ್‌ಟಿಓದಲ್ಲಿ ಕಾರ್ಯನಿರ್ವಹಿಸುವ ರವಿಶಂಕರ್‌ ಅನ್ನೋ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಎತ್ತಾಕಿಕೊಂಡು ಬಂದ ನಂತರ, ಆರ್‌ಟಿಓ ಕಚೇರಿಯಲ್ಲಿ ಅಲ್ಲೋಲಕಲ್ಲೋಲವಾಗಿದೆ. ಜಯನಗರ ಆರ್‌ಟಿಓದಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿರೋ ರವಿಶಂಕರ್‌ ಕಚೇರಿಯಲ್ಲಿದ್ದಾಗಲೇ ಆತನನ್ನು ವಶಕ್ಕೆ ಪಡೆದಿರುವ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ರವಿಶಂಕರ್‌ನನ್ನು ಸಿಸಿಬಿ ಕರೆತಂದ ಬೆನ್ನಲ್ಲೇ ಜಯನಗರ ಆರ್‌ಟಿಓ ಹಿರಿಯ ಅಧಿಕಾರಿ ಗಾಯತ್ರಿದೇವಿ ಸಿಸಿಬಿ ಕಚೇರಿಗೆ ಭೇಟಿ ನೀಡಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆಯಲ್ಲದೇ ಅನುಮಾನಗಳಿಗೂ ಎಡೆ ಮಾಡಿಕೊಟ್ಟಿದೆ. ಕೇವಲ ಒಬ್ಬ ದ್ವೀತಿಯ ದರ್ಜೆ ಗುಮಾಸ್ತನನ್ನು ವಶಕ್ಕೆ ಪಡೆದ ಮಾತ್ರಕ್ಕೆ ಹಿರಿಯ ಆರ್‌ಟಿಓ ಅಧಿಕಾರಿ ಸ್ವತಃ ಸಿಸಿಬಿ ಜಂಟಿ ಆಯುಕ್ತರನ್ನು ಭೇಟಿ ಮಾಡಿರೋದು ಹುಬ್ಬೇರುವಂತೆ ಮಾಡಿದೆ. ಭೇಟಿ ವೇಳೆ ಪ್ರಕರಣ ಸಂಬಂಧ ವಿಚಾರಣೆಗೆ ಕರೆ ತಂದಿದ್ದೇವೆ. ವಿಚಾರಣೆ ಬಳಿಕ ಮಾಹಿತಿ ನೀಡುವುದಾಗಿ ಗಾಯತ್ರಿ ದೇವಿ ಅವರಿಗೆ ಸಂದೀಪ್‌ ಪಾಟೀಲ್‌ ಹೇಳಿ ಕಳಿಸಿದ್ದಾರೆಂದು ಸಿಸಿಬಿ ಮೂಲಗಳು ತಿಳಿಸಿವೆ.

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ