AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾ”ಕಿಂಗ್” ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ

ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ.

ಹ್ಯಾಕಿಂಗ್ ಶ್ರೀಕಿ ಬಳಿ ಇದ್ದ ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ.. ಬಯಲಾಯ್ತು ಮತ್ತಷ್ಟು ಕೃತ್ಯ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
ಆಯೇಷಾ ಬಾನು
|

Updated on: Jan 15, 2021 | 8:07 AM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಸಿಸಿಬಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಮತ್ತಷ್ಟು ವೆಬ್​ಸೈಟ್​ಗಳ ಹ್ಯಾಕ್​ಗೆ ಪ್ಲ್ಯಾನ್​ ಮಾಡಿದ್ದೇ ಎಂದು ಕೃತ್ಯದ ವಿವರಣೆ ನೀಡಿದ್ದಾನೆ.

ಸಿಸಿಬಿ ಪೊಲೀಸರು ಶ್ರೀಕಿಯನ್ನು ಡ್ರಗ್ಸ್​ಕೇಸ್​ನಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಆತ ಹಲವು ವೆಬ್ ಸೈಟ್ ಹ್ಯಾಕಿಂಗ್ ಮಾಡುತ್ತಿದ್ದ ವಿಚಾರ ಬಯಲಾಗಿತ್ತು. ವಿದೇಶಿ ಆ್ಯಪ್ ಸೇರಿದಂತೆ ಸರ್ಕಾರಿ ಆ್ಯಪ್ ಸಹ ಶ್ರೀಕಿ ಹ್ಯಾಕ್ ಮಾಡ್ತಿದ್ದ. ಕೇಸ್ ಸಂಬಂಧ ಸಿಸಿಬಿ, ಶ್ರೀಕಿ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಈಗ ತನಿಖೆ ವೇಳೆ ಮತ್ತಷ್ಟು ಮಾಹಿತಿ ಬಯಲಾಗಿದೆ. ಈತ ಅಂತಾರಾಷ್ಟ್ರೀಯ ವೆಬ್​​ಸೈಟ್​, ಪೋಕರ್​ ಗೇಮ್​ ಹಾಗೂ ಕ್ರಿಪ್ಟೋ ಕರೆನ್ಸಿಗಳಾದ ಬಿಟ್​ ಕಾಯಿನ್, ವೈಎಫ್​ಐ, ಇಥೆರಿಯಂ ಖಾತೆಗಳನ್ನು ಹ್ಯಾಕ್ ಮಾಡಿದ್ದ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಅಲ್ಲದೆ ಶ್ರೀಕಿ ಬಳಿ ಇದ್ದ ಸುಮಾರು ₹9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಜಪ್ತಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬಿಟ್ ಕಾಯಿನ್ ವಶಕ್ಕೆ ಪಡೆಯಲಾಗಿದೆ. ಇನ್ನು ಸುನೀಷ್ ಶೆಟ್ಟಿ, ಪ್ರಸಿದ್ ಶೆಟ್ಟಿ, ಸುಜಯ ಶ್ರೀಕಿ ಮುಖಾಂತರ ಹ್ಯಾಕ್ ಮಾಡಿಸುತಿದ್ರು. ಬಳಿಕ ಬಿಟ್ ಕಾಯಿನ್ ಟ್ರೇಡರ್ಸ್​ಗೆ ಮಾರಾಟ ಮಾಡುತ್ತಿದ್ರು. ಮಾರಟದಿಂದ ಬಂದ ಹಣ ಹಾಗೂ ಹವಾಲ ಹಣ ಪಡೆದು ವಿದೇಶದಿಂದ ಗಾಂಜಾ ತರಿಸಿಕೊಂಡು ಮೋಜು ಮಸ್ತಿ, ಐಶಾರಾಮಿ ಜೀವನ ನಡೆಸುತ್ತಿದ್ರು.

ಸಿಸಿಬಿ ವಿಚಾರಣೆ ವೇಳೆ ಬಯಲಾಯ್ತು ಹ್ಯಾ”ಕಿಂಗ್” ಶ್ರೀಕಿಯ ಮತ್ತೊಂದು ಕೋಡ್..

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ